Friday, September 30, 2022

Latest Posts

ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಬಿಜೆಪಿ ಮುಖಂಡರೊಬ್ಬರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದ ಘಟನೆ ರಾಜಸ್ಥಾನದ ಭರತ್‌ಪುರದಲ್ಲಿ ನಡೆದಿದೆ.
ಭಾನುವಾರ ರಾತ್ರಿ ಸರ್ಕ್ಯೂಟ್ ಹೌಸ್‌ನಿಂದ ಕಾರಿನಲ್ಲಿ ಮನೆಗೆ ಹೋಗುತ್ತಿದ್ದ ಬಿಜೆಪಿ ನಾಯಕ ಕಿರ್ಪಾಲ್ ಸಿಂಗ್ ಅವರನ್ನು ಎರಡು ಬೈಕ್‌ಗಳಲ್ಲಿ ಹಿಂಬಾಲಿಸಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಭರತ್‌ಪುರದ ಬಿಜೆಪಿ ಸಂಸದ ರಂಜೀತಾ ಕೋಲಿ ಅವರ ಆಪ್ತ ಸಹಾಯಕರೂ ಆಗಿರುವ ಸಿಂಗ್ ಅವರ ಮೇಲೆ ಏಳು ಸುತ್ತಿನ ಗುಂಡಿನ ದಾಳಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಸಿಂಗ್ ಅವರನ್ನು ತಕ್ಷಣವೇ ಸರ್ಕಾರಿ ಆರ್‌ಬಿಎಂ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.  ಆ ವೇಳೆ ಅವರು ಸಾವನ್ನಪ್ಪಿದ್ದನ್ನು ವೈದ್ಯರು ದೃಢಪಡಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
“ಆರೋಪಿಗಳ ಪತ್ತೆಕಾರ್ಯ ನಡೆಯುತ್ತಿದೆ. ಇದುವರೆಗೆ ಯಾವುದೇ ಬಂಧನವಾಗಿಲ್ಲ ಎಂದು ಮಥುರಾ ಗೇಟ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಅಧಿಕಾರಿ ರಾಮನಾಥ್ ಸಿಂಗ್ ತಿಳಿಸಿದ್ದಾರೆ. ಹಳೆಯ ವೈಷಮ್ಯದಿಂದ ಈ ಹತ್ಯೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!