ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಮ್ಯಾನೇಜ್‌ಮೆಂಟ್ ಅಸೋಸಿಯೇಷನ್‌ನಿಂದ ನೀಡುವ ಜೀವಮಾನ ಸಾಧನೆ ಪ್ರಶಸ್ತಿಗೆ ಬಿಜೆಪಿ ಮುಖಂಡ ಎಸ್.ಎಂ. ಕೃಷ್ಣ ಆಯ್ಕೆಯಾಗಿದ್ದಾರೆ ಎಂದು ಅಸೋಸಿಯೇಷನ್ ಅಧ್ಯಕ್ಷ ಕೆ.ಎನ್. ನಾರಾಯಣಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾಹಿತಿ ನೀಡಿದ ಅವರು,’ಭಾರತೀಯ ವಾಣಿಜ್ಯ ಮತ್ತು ಕೈಗಾರಿಕೆಗಳ ಮಹಾಸಂಸ್ಥೆಗಳ ಒಕ್ಕೂಟ (ಎಫ್‌ಐಸಿಸಿಐ) ಅಧ್ಯಕ್ಷ ಕೆ. ಉಲ್ಲಾಸ್ ಕಾಮತ್ ಅವರಿಗೆ ‘ಬಿಎಂಎ ಅವಾರ್ಡ್ ಆಫ್ ಎಕ್ಸಲೆನ್ಸ್’ ಪ್ರದಾನ ಮಾಡಲಾಗುತ್ತದೆ ಎಂದರು.
‘ಜುಲೈ 29ರಂದು ದಿ ಚಾನ್ಸರಿ ಪೆವಿಲಿಯನ್ ಹೋಟೆಲ್‌ನಲ್ಲಿ ನಡೆಯುವ ಬಿಎಂಎ 66ನೇ ವಾರ್ಷಿಕ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ’ ಎಂದು ತಿಳಿಸಿದರು.
‘ಉದ್ಯಮಿ ಸಮರ್ಥ ರಾಘವ ನಾಗಭೂಷಣಂ, ಸಿಎಂಆರ್ ವಿಶ್ವವಿದ್ಯಾಲಯದ ಕುಲಪತಿ ಸಬಿತಾ ರಾಮಮೂರ್ತಿ, ಸೇಂಟ್ ಜೋಸೆಫ್ ಕಾಲೇಜಿನ ಫಾದರ್ ವಿಕ್ಟರ್ ಲೋಬೋ, ಪ್ಯಾರಾ ಒಲಂಪಿಯನ್ ಎಚ್.ಎನ್. ಗಿರೀಶ್, ಆರ್.ವಿ. ವಿಶ್ವವಿದ್ಯಾಲಯ ಉಪಕುಲಪತಿ ವೈ.ಎಸ್.ಆರ್ ಮೂರ್ತಿ, ಕಂಬಳ ಶ್ರೀನಿವಾಸ್, ಎಫ್‌ಕೆಸಿಸಿಐ ನಿಕಟಪೂರ್ವ ಅಧ್ಯಕ್ಷ ಐ.ಎಸ್. ಪ್ರಸಾದ್ ಅವರಿಗೆ ‘ಬಿಎಂಎ ಸಾಧಕ ಪ್ರಶಸ್ತಿಗಳನ್ನು’ ಪ್ರದಾನ ಮಾಡಲಾಗುವುದು’ ಎಂದು ಅವರು ಮಾಹಿತಿ ನೀಡಿದರು.