ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಸಾವಿಗೆ ಮಾದಕ ದ್ರವ್ಯ ಸೇವನೆ ಕಾರಣ: ಸ್ಫೋಟಕ ಮಾಹಿತಿ ನೀಡಿದ ಗೋವಾ ಪೊಲೀಸರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬಿಜೆಪಿ ನಾಯಕಿ,ನಟಿ ಸೋನಾಲಿ ಫೋಗಟ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು, ಸಾವಿಗೆ ಮಾದಕ ದ್ರವ್ಯ ಸೇವನೆ ಕಾರಣ ಎಂದು ಗೋವಾ ಪೊಲೀಸರು ತಿಳಿಸಿದ್ದಾರೆ.

ಸೋನಾಲಿ ಪೋಗಟ್‌ ಸಾಯುವ ಹಿಂದಿನ ದಿನ ರಾತ್ರಿ ಪಾರ್ಟಿಯೊಂದರಲ್ಲಿ ಭಾಗಿಯಾಗಿದ್ದರು. ಈ ವೇಳೆ ಅವರಿಗೆ ಬಲವಂತದಿಂದ ಮಾದಕ ವಸ್ತು ನೀಡಲಾಗಿದೆ. ಇದೇ ಅವರ ಸಾವಿಗೆ ಕಾರಣವಾಗಿರಬಹುದು ಎಂದು ಗೋವಾ ಪೊಲೀಸರು ಮಾಹಿತಿ ನೀಡಿದ್ದಾರೆ.

ಮೃತದೇಹದ ಮೇಲೆ ಅನೇಕ ಗಾಯದ ಗುರುತುಗಳಿರುವುದು ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ನಿನ್ನೆ ಬಯಲಾಗಿತ್ತು. ಹೀಗಾಗಿ ಪೊಲೀಸರು ಇದೊಂದು ಕೊಲೆ ಎಂಬ ತೀರ್ಮಾನಕ್ಕೆ ಬಂದು ಗುರುವಾರ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಇದೀಗ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಆರೋಪಿ ಸುಧೀರ್ ಸಾಂಗ್ವಾನ್ ಮತ್ತು ಅವರ ಸಹವರ್ತಿ ಸುಖ್ವಿಂದರ್ ಸಿಂಗ್ ಅವರು ಕ್ಲಬ್‌ನಲ್ಲಿ ಸೋನಾಲಿ ಫೋಗಟ್ ಜೊತೆ ಪಾರ್ಟಿ ಮಾಡುತ್ತಿರುವುದು ಕಂಡುಬಂದಿದೆ. ಅವರಲ್ಲಿ ಓರ್ವರು ಸೋನಾಲಿಗೆ ಬಲವಂತವಾಗಿ ಡ್ರಗ್ಸ್‌ ನೀಡಿರುವುದು ಕಂಡು ಬಂದಿದೆ. ಯಾವುದೋ ಒಂದು ರಾಸಾಯನಿಕವನ್ನು ಅವರಿಗೆ ನೀಡಲಾಗಿದೆ. ಅದಾದ ನಂತರ ಅವರು ಅವರ ಮೇಲಿನ ಕಂಟ್ರೋಲ್‌ ಕಳೆದುಕೊಂಡಿದ್ದಾರೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!