ಬಿಜೆಪಿ ನಾಯಕಿ ಸೋನಾಲಿ ಪೋಗಟ್ ಸಾವಿನ ಪ್ರಕರಣ: ಎಫ್‌ಐಆರ್ ದಾಖಲಿಸಿದ ಸಿಬಿಐ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬಿಜೆಪಿ ನಾಯಕಿ ಸೋನಾಲಿ ಪೋಗಟ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಎಫ್‌ಐಆರ್ ದಾಖಲಿಸಿಕೊಂಡಿದೆ. ತನಿಖೆ ಆರಂಭಿಸಿದೆ.

ಗೋವಾದ ರೆಸ್ಟೋರೆಂಟ್ ನಲ್ಲಿ ಸೋನಾಲಿ ಪೋಗಟ್ ಅನುಮಾನಾಸ್ಪದವಾಗಿ ಮೃತಪಟ್ಟಿದ್ದರು. ಗೋವಾ ಮುಖ್ಯಮಂತ್ರಿ ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದರು.

ಕುಟುಂಬದವರು ಮತ್ತು ಗೋವಾ ರಾಜ್ಯ ಸರ್ಕಾರದ ನಿರಂತರ ಮನವಿಯ ನಂತರ, ಕಳೆದ ತಿಂಗಳು ನಿಗೂಢವಾಗಿ ಸಾವನ್ನಪ್ಪಿದ ಸೋನಾಲಿ ಫೋಗಟ್ ಸಾವಿನ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳ(ಸಿಬಿಐ) ವಹಿಸಿಕೊಂಡಿದೆ.

ಹರಿಯಾಣ ಬಿಜೆಪಿ ನಾಯಕಿ ಸಾವಿನ ಕುರಿತು ಸಿಬಿಐ ತನಿಖೆಗೆ ಕೋರಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಗೃಹ ಸಚಿವಾಲಯಕ್ಕೆ ಪತ್ರ ಬರೆದ ನಂತರ ಈ ಬೆಳವಣಿಗೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!