ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಯುವ ಮುಖಂಡನನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆಗೈದಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ನಡೆದಿದೆ.
ಅನುಜ್ ಚೌಧರಿ (34) ಹತ್ಯೆಯಾದ ಸಂಭಾಲ್‌ನ ಬಿಜೆಪಿ ನಾಯಕ. ಅನುಜ್ ತಮ್ಮ ಅಪಾರ್ಟ್‌ಮೆಂಟ್‌ನ ಹೊರಗೆ ಸ್ನೇಹಿತನೊಂದಿಗೆ ನಡೆದುಕೊಂಡು ಹೋಗುತ್ತಿರುವಾಗ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಗಂಭೀರವಾಗಿ ಗಾಯಗೊಂಡಿದ್ದ ಚೌಧರಿ ಅವರನ್ನು ಮೊರಾದಾಬಾದ್ ಆಸ್ಪತ್ರೆಗೆ ಕೂಡಲೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.