ಹೊಸದಿಗಂತ ಚಿತ್ರದುರ್ಗ:
ಸಂಡೂರು ವಿಧಾನಸಭಾ ಕ್ಷೇತ್ರದ ತೋರಣಗಲ್‌ನಲ್ಲಿ ನಡೆದ ಪ್ರಮುಖ ಮುಖಂಡರ ಸಭೆಯಲ್ಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರ ಪರವಾಗಿ ಪ್ರಚಾರ ಕಾರ್ಯ ನಡೆಸಲಾಯಿತು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮಂತ್ರಿಗಳು ಹಾಗೂ ಶಾಸಕ ಗಾಲಿ ಜನಾರ್ದನ್‌ರೆಡ್ಡಿ, ಕೇಂದ್ರದ ಮಾಜಿ ಸಚಿವರಾದ ಭಗವಂತ ಖೂಬಾ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಯ ವಿಧಾನ ಪರಿಷತ್ ಶಾಸಕ ಹಾಗೂ ಸಂಡೂರು ಉಪಚುನಾವಣೆ ಉಸ್ತುವಾರಿ ಕೆ.ಎಸ್. ನವೀನ್, ಸಕಲೇಶಪುರದ ಶಾಸಕರಾದ ಸಿಮೆಂಟ್ ಮಂಜು, ದಿವಾಕರ್, ವಿಜಯನಗರ ಜಿಲ್ಲೆಯ ಜಿಲ್ಲಾಧ್ಯಕ ಚನ್ನಬಸವನ ಗೌಡ್ರು, ಬಳ್ಳಾರಿಯ ಜಿಲ್ಲಾಧ್ಯಕ್ಷ ಅನಿಲ್ ನಾಯ್ಡು ಸೇರಿದಂತೆ ಹಲವು ಮುಖಂಡರು ಪ್ರಚಾರ್ಯ ಕಾರ್ಯದಲ್ಲಿ ಭಾಗವಹಿಸಿ ಮತಯಾಚನೆ ಮಾಡಿದರು.