ಹೊಸದಿಗಂತ ಹುಬ್ಬಳ್ಳಿ:
ಸಂಸದ ಗೋವಿಂದ ಕಾರಜೋಳ ಅವರಿಗೆ ಬಹುಶಃ ಬುದ್ದಿ ಭ್ರಮಣೆಯಾಗಿರಬೇಕು. ಬಿಜೆಪಿ ನಾಯಕರು ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಟೀಕಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಿಂದೆ ಅಧಿಕಾರದಲ್ಲಿ ಇದ್ದಾಗ ದುರಾಡಳಿತ ಮಾಡಿತು. ಅವರಿಗೆ ಅಧಿಕಾರ ದುರುಪಯೋಗ ಹಾಗೂ ಅಕ್ರಮ ಮಾಡಿ ರೂಢಿಯಾಗಿದೆ. ಈಗಲೂ ಅದನ್ನೇ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಕಾಂಗ್ರೆಸ್ 135 ಶಾಸಕರು ಒಗ್ಗಟ್ಟಿನಿಂದ ಇದ್ದಾರೆ. ನಮ್ಮ ಸರ್ಕಾರ ಸುಭದ್ರವಾಗಿದೆ. ಐದು ವರ್ಷ ನಾವು ಅಧಿಕಾರ ನಡೆಸುತ್ತೇವೆ ಎಂದರು.
ಕಾಂಗ್ರೆಸ್ ಉತ್ತಮ ಅಭ್ಯರ್ಥಿ ಆಯ್ಕೆ ಮಾಡಿದ್ದು, ಕಾರ್ಯಕರ್ತರು ಸಹ ಹುಮ್ಮಸ್ಸಿನಲ್ಲಿದ್ದಾರೆ. ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸ ವಿದೆ ಎಂದರು.
ಬಿಜೆಪಿ ಹಾಗೂ ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದೆ. ಪ್ರಜಾಸತ್ತಾತ್ಮಕದಿಂದ ಆಯ್ಕೆಯಾದ ಸರ್ಕಾರವನ್ನು ಬುಡಮೇಲು ಮಾಡುತ್ತಿದೆ. ಜನವಿರೋಧಿ ನೀತಿಯಿಂದ ಬಿಜೆಪಿ ಶಾಸಕರು ಬೇಸತ್ತಿದ್ದು, ಕಾಂಗ್ರೆಸ್ ಗೆ ಬರುವ ಒಳವು ತೊರಿಸುತ್ತಿದ್ದಾರೆ. ಕಾಂಗ್ರೆಸ್ ಯಾರೇ ಬಂದರೂ ಅವರನ್ನು ಸೇರಿಸಿಕೊಳ್ಳಲು ಒಂದು ವ್ಯವಸ್ಥೆ ಇದೆ ಎಂದು ತಿಳಿಸಿದರು.