ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಮಾಜಿ ಸಚಿವ ಎಸ್.ಟಿ.ಸೋಮಶೇಖರ್ ಸಾರ್ವತ್ರಿಕ ಚುನಾವಣೆಯ ನಂತರ ಸದಾ ಕಾಂಗ್ರೆಸ್ ನಾಯಕರ ಜೊತೆ ಕಾಣಿಸಿಕೊಳ್ಳುತ್ತಿದ್ದ ಸೋಮಶೇಖರ್ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮತ ಚಲಾಯಿಸಿದ್ದಾರೆ. ಮಾಜಿ ಸಚಿವ ಶಿವರಾಮ ಹೆಬ್ಬಾರ್ ಅವರು ಮತದಾನದಲ್ಲಿ ಪಾಲ್ಗೊಳ್ಳದೇ ಶಾಕ್ ಕೊಟ್ಟಿದ್ದಾರೆ. ಇದೀಗ ಈ ಬೆಳವಣಿಗೆಗಳು ಬಿಜೆಪಿ ನಾಯಕರ ಸಿಟ್ಟಿಗೆ ಕಾರಣವಾಗಿದೆ.
ನಿನ್ನೆ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿತ್ತು. ಅಖಾಡಕ್ಕಿಳಿದ ಮೂವರು ಅಭ್ಯರ್ಥಿಗಳು ಗೆದ್ದರು. ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಅಡ್ಡ ಮತದಾನ ಚಲಾಯಿಸಿ ಕಾಂಗ್ರೆಸ್ ಗೆ ಮತ ನೀಡಿದರು. ಶಿವರಾಮ ಹೆಬ್ಬಾರ್ ಮತದಾನದಿಂದ ದೂರ ಉಳಿದಿದ್ದರು. ಇದೀಗ ಇಬ್ಬರು ನಾಯಕರ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿ ನಾಯಕರು ಸಜ್ಜಾಗಿದ್ದಾರೆ.