ಹೊಸದಿಗಂತ ಡಿಜಿಟಲ್ ಡೆಸ್ಕ್, ಶಿವಮೊಗ್ಗ
ಶಿವಮೊಗ್ಗದ ಅಹ್ಮದ್ ವೃತ್ತದಲ್ಲಿ ಸ್ವಾತಂತ್ರ್ಯೋತ್ಸವ ದಿನದಂದು ವೀರ್ ಸಾವರ್ಕರ್ ಮತ್ತು ಟಿಪ್ಪು ಸುಲ್ತಾನ್ ಫ್ಲೆಕ್ಸ್ ವಿಚಾರವಾಗಿ ಭಾರಿ ಗಲಾಟೆ ನಡೆದಿತ್ತು.
ಈ ಸಂದರ್ಭದಲ್ಲಿ ನಡೆದ ಗಲಾಟೆಯಲ್ಲಿ ಕೆಲ ದುಷ್ಕರ್ಮಿಗಳು ಯುವಕನೊರ್ವನಿಗೆ ಚಾಕು ಇರಿದು ಹಲ್ಲೆ ನಡೆಸಿದ್ದರು. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಪ್ರೇಮ್ ಸಿಂಗ್(27)ರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ರಾಜ್ಯದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಮತ್ತು ಸಂಸದ ಬಿ.ವೈ. ರಾಘವೇಂದ್ರ ಪ್ರೇಮ್ ಸಿಂಗ್ ಅವರ ಆರೋಗ್ಯವನ್ನು ವಿಚಾರಿಸಿದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ