ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ನಂದಿಪರ್ವತ ಆಶ್ರಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಹಾಗೂ ಮೈಸೂರಿನ ಟಿ.ನರಸೀಪುರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಕೊಲೆಯನ್ನು ಖಂಡಿಸಿ ಇಂದು ಬಿಜೆಪಿ ನಾಯಕರು ಮೆರವಣಿಗೆ ನಡೆಸಲಿದ್ದಾರೆ.
ಎರಡೂ ಹತ್ಯೆಗಳನ್ನು ಖಂಡಿಸಿ ಹಾಗೂ ಜೈನಮುನಿಗಳ ಹತ್ಯೆ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿ ಎಂದು ಬಿಜೆಪಿ ಒತ್ತಾಯಿಸಿದ್ದು, ಇಂದು ಬೆಳಗ್ಗೆ 11 ಗಂಟೆಗೆ ರಾಜಭವನಕ್ಕೆ ಮೆರವಣಿಗೆ ಸಾಗಲಿದ್ದಾರೆ.
ಜೈನಮುನಿಗಳ ಹತ್ಯೆ ಹಾಗೂ ಯುವಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯ ಆದಷ್ಟು ಬೇಗ ಹೊರಬರಬೇಕು, ಸತ್ಯಾಸತ್ಯತೆ ಪರಿಶೀಲನೆಗೆ ಬಿಜೆಪಿ ಎರಡು ತಂಡ ರಚನೆ ಮಾಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ನೇತೃತ್ವದಲ್ಲಿ ತಂಡಗಳು ರಚನೆಯಾಗಿವೆ.