April 24, 2026
Friday, April 24, 2026
spot_img

ಬೆಂಗಳೂರಿನ ರಸ್ತೆಗುಂಡಿಗಳನ್ನು ಖುದ್ದು ಮುಚ್ಚಿದ ಬಿಜೆಪಿ ನಾಯಕರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಗಂಟೆಗಳ ಕಾಲ ರಸ್ತೆ ತಡೆದು ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಯಮನಂತೆ ಕಾಯುತ್ತಿರುವ ರಸ್ತೆ ಗುಂಡಿಗಳನ್ನು ಮುಚ್ಚದ ಸರ್ಕಾರದ ವಿರುದ್ಧ ಬಿಜೆಪಿ ದನಿಯೆತ್ತಿದೆ.

ಬೆಂಗಳೂರು ನಗರದ ಬಸವನಗುಡಿ, ಗೋವಿಂದರಾಜನಗರ, ವಿಜಯನಗರ, ಬಿಟಿಎಂ ಲೇಔಟ್‌ ಕ್ಷೇತ್ರಗಳಲ್ಲಿ ರಸ್ತೆ ತಡೆ ನಡೆಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿದಿನ 1 ಗಂಟೆ ರಸ್ತೆ ತಡೆ ನಡೆಸಿ ಅಥವಾ ಗುಂಡಿ ಬಿದ್ದಿರೋ ಜಾಗದಲ್ಲಿ ಕುಳಿತು ಪ್ರತಿಭಟನೆ ನಡೆಸಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ. ಇದರೊಂದಿಗೆ ತಾವೇ ಗುಂಡಿ ಮುಚ್ಚುವ ಕೆಲಸವನ್ನೂ ಮಾಡುತ್ತಿದ್ದಾರೆ.

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಆಯಾಯಾ ಸ್ಥಳೀಯ ನಾಯಕರ ನೇತೃತ್ವದಲ್ಲಿ ರಸ್ತೆ ರೋಕೋ (ರಸ್ತೆ ತಡೆ) ನಡೆಸಿ ಪ್ರತಿಭಟನೆ ನಡೆಸಲಾಗುತ್ತಿದೆ.ಬೆಂಗಳೂರು ನಗರದ ಮಹಾಲಕ್ಷ್ಮಿ ಲೇಔಟ್‌ ಕ್ಷೇತ್ರದಲ್ಲಿ ರಸ್ತೆಗುಂಡಿ ಸಂಬಂಧ ಶಾಸಕ ಗೋಪಾಲಯ್ಯ ನೇತೃತ್ವದಲ್ಲಿ ಸಂಚಾರ ತಡೆ ಚಳವಳಿ ನಡೆಸಲಾಗುತ್ತಿದೆ. ಕಠೀರವ ಸ್ಟುಡಿಯೋ ಬಳಿ ರಸ್ತೆ ತಡೆದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಂಠೀರವ ಸ್ಟುಡಿಯೋ ರಸ್ತೆ, ಸುಮ್ಮನಹಳ್ಳಿ, ನಾಗರಭಾವಿ, ಕಾಮಾಕ್ಷಿಪಾಳ್ಯ, ಮಾಗಡಿ ರಸ್ತೆಗಳು ಗುಂಡಿಮಯವಾಗಿದ್ದರೂ ಸರ್ಕಾರ ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ಕಿಡಿ ಕಾರಿದ್ದಾರೆ

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !