ಕರಾವಳಿಯಲ್ಲಿ ರಾಜ್ಯ ಸರಕಾರದ ವಿರುದ್ಧ ಗುಡುಗಿದ ಬಿಜೆಪಿ ನಾಯಕರು

ಹೊಸದಿಗಂತ ವರದಿ, ಮಂಗಳೂರು:

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಕಚೇರಿ ಮುಂಭಾಗ ಏಕಕಾಲದಲ್ಲಿ ಇಂದು ಬೃಹತ್ ಮಟ್ಟದಲ್ಲಿ ಪ್ರತಿಭಟನೆ ನಡೆಯಿತು.

ಉಭಯ ಜಿಲ್ಲೆಗಳಲ್ಲಿ ವಿವಿಧ ಕಡೆ ಬಿಜೆಪಿಯ ಸಂಸದರು, ಶಾಸಕರು, ಜನಪ್ರತಿನಿಧಿಗಳು, ಜಿಲ್ಲೆ, ತಾಲೂಕು, ಗ್ರಾಮ ಮಟ್ಟದ ಪದಾಧಿಕಾರಿಗಳು ಭಾಗವಹಿಸಿದ್ದರು.

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಕಚೇರಿ ಮುಂಭಾಗ ದಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬೃಜೇಶ್ ಚೌಟ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ , ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಸುಳ್ಳ್ಯಾ ಶಾಸಕಿ ಭಾಗೀರಥಿ ಮುರುಳ್ಯ ,ಮೂಲ್ಕಿ- ಮೂಡಬಿದ್ರಿ ಶಾಸಕ ಉಮಾನಾಥ್ ಕೋಟ್ಯಾನ್, ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಪ್ರತಾಪ್ ಸಿಂಹ ನಾಯಕ್, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮೊದಲಾದವರು ಪ್ರತಿಭಟನೆ ನಡೆಸಿದರು.

ಉಡುಪಿಯಲ್ಲಿ ಗುಡುಗಿದ ಬಿಜೆಪಿ ನಾಯಕರು
ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಉಡುಪಿಯಲ್ಲೂ ಭಾರೀ ಪ್ರತಿಭಟನೆ ನಡೆದಿದ್ದು, ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ , ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ,ಕುಂದಾಪುರ ಶಾಸಕ ಕಿರಣ್ ಕುಮಾರ್ ಕೂಡ್ಗಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಮೊದಲಾದವರು ಸಾಥ್ ನೀಡಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು .

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!