ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೀದರ್ನಲ್ಲಿ ಗುತ್ತಿಗೆದಾರ ಸಚಿನ್ ಬರೆದ ಡೆತ್ನೋಟ್ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹೆಸರಿದೆ ಎಂಬುದು ಬಿಜೆಪಿ ಆರೋಪ ಆಗಿದೆ. ಹೀಗಾಗಿ ಸಾವಿಗೆ ಸಚಿವರೇ ಕಾರಣ ಎಂದು ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಬಿಜೆಪಿ ನಾಯಕರು ಮುತ್ತಿಗೆಗೆ ಯತ್ನಿಸಿದ್ದಾರೆ. ವಿಪಕ್ಷ ನಾಯಕ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗಿಯಾದರು.
ಇನ್ನು ಮುಂಚಿತವಾಗಿಯೇ ಸಿದ್ಧತೆ ಮಾಡಿಕೊಂಡಿದ್ದ ಪೊಲೀಸರು, ಪ್ರತಿಭಟನಾಕಾರನ್ನು ತಡೆದರು. ಈ ವೇಳೆ ತಳ್ಳಾಟ, ನೂಕಾಟವೂ ನಡೆಯಿತು. ಎರಡು ದಿನ ಹಿಂದಷ್ಟೇ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಪ್ರತಿಭಟನೆ ಮಾಡಲಿ. ಒಳ್ಳೆ ರೀತಿಯಲ್ಲಿ ಆತಿಥ್ಯ ಕೊಡುತ್ತೇನೆ ಎಂದಿದ್ದರು. ಇದೀಗ ಅದರಂತೆಯೇ ಮುತ್ತಿಗೆ ಹಾಕಲು ಬಂದ ಬಿಜೆಪಿ ನಾಯಕರಿಗೆ ಎಳನೀರು, ಕಾಫಿ, ಟೀ ವ್ಯವಸ್ಥೆ ಮಾಡಲಾಗಿದ್ದು ಗಮನ ಸೆಳೆಯಿತು.