ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆ ವೋಟಿಂಗ್ ಪ್ರಕ್ರಿಯೆ ಜಾರಿಯಲ್ಲಿದ್ದು, ಬೆಂಗಳೂರಿನ 3 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.
ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜೀವ್ ಗೌಡ ವಿರುದ್ಧ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ 1,03,519 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
ಬೆಂಗಳೂರು ದಕ್ಷಿಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ವಿರುದ್ಧ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ 2,10,262 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಡಾ.ಸಿಎನ್.ಮಂಜುನಾಥ್ ಕಾಂಗ್ರೆಸ್ ಅಭ್ಯರ್ಥಿ ಡಿಕೆ.ಸುರೇಶ್ ವಿರುದ್ಧ 1,25,760 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
ಇನ್ನು ಬೆಂಗಳೂರು ದಕ್ಷಿಣದಲ್ಲಿ ಬಿಜೆಪಿ ಅಭ್ಯರ್ಥಿ ಪಿಸಿ.ಮೋಹನ್ ವಿರುದ್ಧ ಮನ್ಸೂನ್ ಅಲಿ ಖಾನ್ ಅವರು 53,382 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.