ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯಲ್ಲಿ ಚುನಾವಣಾ ಫಲಿತಾಂಶ ಹೊರಬಿದ್ದು 10 ದಿನಗಳು ಕಳೆದಿವೆ, ಇದುವರೆಗೂ ಮುಖ್ಯಮಂತ್ರಿ ಯಾರೆಂಬುದರ ಬಗ್ಗೆ ಸುಳಿವನ್ನು ಪಕ್ಷ ಬಿಟ್ಟುಕೊಟ್ಟಿಲ್ಲ, ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಮುಖ್ಯಮಂತ್ರಿ ಹೆಸರನ್ನು ಬಹಿರಂಗಪಡಿಸಲಾಗುತ್ತದೆ.
ದೆಹಲಿಯಲ್ಲಿ ನಡೆಯುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಾಗುವುದು ಮತ್ತು ಗುರುವಾರ ರಾಮಲೀಲಾ ಮೈದಾನದಲ್ಲಿ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಪ್ರಮಾಣವಚನ ಸಮಾರಂಭಕ್ಕೆ ಸಿದ್ಧತೆಗಳು ಭರದಿಂದ ನಡೆಯುತ್ತಿವೆ. ನಾಳೆ ಬೆಳಗ್ಗೆ 11.30 ಕ್ಕೆ ರಾಮಲೀಲಾ ಮೈದಾನದಲ್ಲಿ ನೂತನ ಸಿಎಂ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.