ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ವಿಪಕ್ಷ ನಾಯಕನ ಹೆಸರು ಘೋಷಣೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ವಿಪಕ್ಷ ನಾಯಕನ ಹೆಸರು ಘೋಷಿಸುವ ಸಾಧ್ಯತೆಯಿದೆ.

ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸಂಜೆ 6 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಸಭೆಯಲ್ಲಿ ವಿಪಕ್ಷ ನಾಯಕನ ಆಯ್ಕೆ ಪ್ರತಿಕ್ರಿಯೆ ನಡೆಯಲಿದೆ.

ಶಾಸಕರಾದ ಆರ್.ಅಶೋಕ್, ಡಾ.ಸಿ.ಎನ್.ಅಶ್ವತ್ಥನಾರಾಯಣ ಹಾಗೂ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಅವರ ಹೆಸರುಗಳು ವಿಪಕ್ಷ ನಾಯಕನ ರೇಸ್‌ನಲ್ಲಿ ಕೇಳಿಬರುತ್ತಿದ್ದು, ಇಂದು ಈ ಕುತೂಹಲಕ್ಕೆ ತೆರೆ ಬೀಳುವ ಸಾಧ್ಯತೆಯಿದೆ.

ಶಾಸಕರ ಸಮ್ಮುಖದಲ್ಲಿ ವಿಪಕ್ಷ ನಾಯಕರ ಹೆಸರು ಘೋಷಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!