ಗುಜರಾತ್, ಹಿಮಾಚಲ ಪ್ರದೇಶದಲ್ಲಿ ಗೆದ್ದು ಅಧಿಕಾರ ಉಳಿಸಿಕೊಳ್ಳಲಿದೆ ಬಿಜೆಪಿ: ಸಮೀಕ್ಷೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ವಿಧಾನಸಭೆ ಚುನಾವಣೆಯಲ್ಲಿ ಗುಜರಾತ್ ಮತ್ತು ಹಿಮಾಚಲ ಪ್ರದೇಶ ಎರಡರಲ್ಲೂ ಬಿಜೆಪಿ ಗೆದ್ದು ಸರ್ಕಾರವನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಶುಕ್ರವಾರ ಸಮೀಕ್ಷೆ ಹೇಳಿದೆ.
ಇಂಡಿಯಾ ಟಿವಿ-ಮ್ಯಾಟ್ರಿಜ್ ಸಮೀಕ್ಷೆಯು ಗುಜರಾತ್‌ನಲ್ಲಿ ಬಿಜೆಪಿಗೆ ಸುಮಾರು ಮೂರನೇ ಎರಡರಷ್ಟು ವಿಜಯವನ್ನು ಭವಿಷ್ಯ ನುಡಿದಿದೆ. ಇದು 2017 ರ ಚುನಾವಣೆಗಿಂತ ಸುಧಾರಣೆಯಾಗಿದೆ. ಹಾಗೆಯೇ ಹಿಮಾಚಲ ಪ್ರದೇಶದಲ್ಲಿ ಕೇಸರಿ ಪಕ್ಷವು ಆರಾಮವಾಗಿ ಗೆಲ್ಲುವ ಸಾಧ್ಯತೆಯಿದೆ. ಆದರೆ ಕಳೆದ ಚುನಾವಣೆಗಿಂತ ಒಂದೆರಡು ಸ್ಥಾನಗಳನ್ನು ಕಳೆದುಕೊಳ್ಳಬಹುದು.
ಗುಜರಾತ್‌ನಲ್ಲಿ 182 ಸ್ಥಾನಗಳಲ್ಲಿ ಬಿಜೆಪಿ 119 ಸ್ಥಾನಗಳನ್ನು ಗೆಲ್ಲಬಹುದು ಮತ್ತು ಕಾಂಗ್ರೆಸ್ 59 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಸಮೀಕ್ಷೆ ಭವಿಷ್ಯ ನುಡಿದಿದೆ. ಗುಜರಾತಿನಲ್ಲಿ ಆಕ್ರಮಣಕಾರಿಯಾಗಿ ಪ್ರಚಾರ ನಡೆಸುತ್ತಿರುವ ಎಎಪಿಗೆ ಹೆಚ್ಚು ಬಲ ಸಿಗದಿರುವ ಅಂಶ ಸಮೀಕ್ಷೆಯಲ್ಲಿ ವ್ಯಕ್ತವಾಗಿದೆ. ಎಎಪಿ ಕೇವಲ ಎರಡು ಸ್ಥಾನಗಳಿಗಷ್ಟೇ ತೃಪ್ತಿಪಡಬೇಕಾಗಬಹುದು.
2017 ರ ಗುಜರಾತ್ ಚುನಾವಣೆಯಲ್ಲಿ ಬಿಜೆಪಿ 99 ಸ್ಥಾನಗಳನ್ನು ಗೆದ್ದಿದ್ದರೆ, ಕಾಂಗ್ರೆಸ್ 81 ಮತ್ತು ಇತರರು 2 ಸ್ಥಾನಗಳನ್ನು ಗೆದ್ದಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!