ಪ್ರಿಯಾಂಕ ಖರ್ಗೆ ಹೇಳಿಕೆಗೆ ಕೊಡಗು ಬಿಜೆಪಿ ಮಹಿಳಾ ಮೋರ್ಚಾ ಖಂಡನೆ

ಹೊಸದಿಗಂತ ವರದಿ ಮಡಿಕೇರಿ:

ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆ ಅವರು ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದು, ಇದನ್ನು ತೀವ್ರವಾಗಿ ಖಂಡಿಸುವುದಾಗಿ ಕೊಡಗು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಚೋಡುಮಾಡ ಶರೀನ್ ಸುಬ್ಬಯ್ಯ, ಪ್ರಧಾನ ಕಾರ್ಯದರ್ಶಿಗಳಾದ ಅನಿತಾ ಪೂವಯ್ಯ ಹಾಗೂ ಬಿ.ಎನ್.ಭುವನೇಶ್ವರಿ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ಉದ್ಯೋಗದ ವಿಚಾರದಲ್ಲಿ ಸರ್ಕಾರವನ್ನು ಟೀಕಿಸುವ ನೆಪದಲ್ಲಿ ಕಾಂಗ್ರೆಸ್ ಶಾಸಕರು, ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಇದು ರಾಜ್ಯದ ಎಲ್ಲಾ ಮಹಿಳಾ ಸಮೂಹಕ್ಕೆ ಮಾಡಿದ ಅಪಮಾನವಾಗಿದೆ. ಇವರ ಹೇಳಿಕೆ ಕಾಂಗ್ರೆಸ್ ಸಂಸ್ಕೃತಿಯನ್ನು ಪ್ರತಿಬಿಂಬಿಸಿದೆ ಎಂದು ಆರೋಪಿಸಿದ್ದಾರೆ.

ಪ್ರಿಯಾಂಕ್ ಖರ್ಗೆ ಅವರು ತಾವು ನೀಡಿದ ಹೇಳಿಕೆಯನ್ನು ಹಿಂದಕ್ಕೆ ಪಡೆದು ಮಹಿಳೆಯರ ಕ್ಷಮೆ ಕೇಳಬೇಕು ಮತ್ತು ಕಾಂಗ್ರೆಸ್ ಪಕ್ಷ ಇವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಶರೀನ್ ಸುಬ್ಬಯ್ಯ ಒತ್ತಾಯಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!