ಬಿಜೆಪಿ ಪ್ರಣಾಳಿಕೆ 24 ಕ್ಯಾರೆಟ್​ ಗೋಲ್ಡ್​ನಂತೆ ಪರಿಶುದ್ಧ: ರಾಜನಾಥ್​ ಸಿಂಗ್​

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇಂದು ಬಿಜೆಪಿ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.

ಪ್ರಣಾಳಿಕೆಯಲ್ಲಿ ಮಹಿಳೆಯರು, ರೈತರು, ಬಡವರು ಹಾಗೂ ಯುವಕರ ಏಳಿಗೆಯ ಜತೆಗೆ 14 ಭರವಸೆಗಳನ್ನು ನೀಡಲಾಗಿದ್ದು,ಈ ಭರವಸೆ 24 ಕ್ಯಾರೆಟ್​ ಗೋಲ್ಡ್​ನಂತೆ ಪರಿಶುದ್ಧವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಬಣ್ಣಿಸಿದ್ದಾರೆ.

ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪ್ರಣಾಳಿಕೆ ಬಿಡುಗಡೆ ಬಳಿಕ ಮಾತನಾಡಿದ ರಾಜನಾಥ್​ ಸಿಂಗ್​, ಬಿಜೆಪಿ ತನ್ನ ಬದ್ಧತೆಗಳನ್ನು ಈಡೇರಿಸುವ ಮೂಲಕ ಜನರಲ್ಲಿ ವಿಶ್ವಾಸಾರ್ಹತೆಯನ್ನು ಗಳಿಸಿದೆ. ಪ್ರಣಾಳಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಭರವಸೆಗಳು 24 ಕ್ಯಾರೆಟ್​ ಗೋಲ್ಡ್​ನಂತೆ ಪರಿಶುದ್ಧವಾಗಿದೆ. ಬಿಜೆಪಿ ಬಿಡುಗಡೆ ಮಾಡಿರುವ ಸಂಕಲ್ಪ ಪತ್ರವನ್ನು ವಿಶ್ವ ರಾಜಕಾರಣದಲ್ಲಿ ಸುವರ್ಣಾಲಂಕಾರವಾಗಿ ನೋಡಲಾಗುತ್ತಿದೆ ಎಂದು ಹೇಳಿದ್ದಾರೆ.

ಮಹಿಳಾ ಮೀಸಲಾತಿ, ಆರ್ಟಿಕಲ್​ 370 ರದ್ದತಿ, ರಾಮಮಂದಿರ ನಿರ್ಮಾಣ ಸೇರಿದಂತೆ ಕೇಂದ್ರ ಬಿಜೆಪಿ ಸರ್ಕಾರವು ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಂಡಿದ್ದು, ಈ ಹಿಂದೆ ನಾವು ಚುನಾವಣೆ ಸಮಯದಲ್ಲಿ ನೀಡಿದ್ದ ಬಹುತೇಕ ಭರವಸೆಗಳನ್ನು ಈಡೇರಿಸಿದ್ದೇವೆ. ಪ್ರಣಾಳಿಕೆ ತಯಾರಿ ವೇಳೆ ನಾವು 15 ಲಕ್ಷಕ್ಕೂ ಅಧಿಕ ಸಲಹೆಗಳನ್ನು ಸ್ವೀಕರಿಸಿದ್ದೇವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!