ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

‘ಸಿಎಂ ಸ್ಥಾನದಿಂದ ಯಡಿಯೂರಪ್ಪ ಅವರನ್ನು ತೆಗೆದರೆ ಬಿಜೆಪಿ ಸವ೯ನಾಶ’

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………

ಹೊಸದಿಗಂತ ವರದಿ ಕಲಬುರಗಿ:

ರಾಜ್ಯದ ಮುಖ್ಯಮಂತ್ರಿಯಾದ ಬಿ.ಎಸ್.ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಿದ್ದೇ ಆದಲ್ಲಿ, ರಾಜ್ಯದಲ್ಲಿ ಬಿಜೆಪಿ ಪಕ್ಷದ ಅಸ್ಥಿತ್ವ ಸವ೯ನಾಶವಾಗಲಿದೆ ಎಂದು ಶ್ರೀಶೈಲಂ ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳು ಹೇಳಿದ್ದಾರೆ.

ಅವರು ಬುಧವಾರ ನಗರದ ಸುಲಫಲ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಯಾವುದೇ ಕಾರಣಕ್ಕೂ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆಯಬಾರದು. ಯಡಿಯೂರಪ್ಪ ಅವರು 40 ವಷ೯ದಿಂದ ಪಕ್ಷವನ್ನು ಸಂಘಟನೆ ಮಾಡಿ ಕನಾ೯ಟಕದಲ್ಲಿ ಬೆಳೆಸಿದ್ದಾರೆ. ಹೀಗಾಗಿ ಇನ್ನೆರಡು ವಷ೯ಗಳ ಕಾಲ ಅವರೇ ಸಿಎಂ ಆಗಿ ಮುಂದುವರೆಯಬೇಕು ಎಂದರು.

ಒಂದು ವೇಳೆ ಯಡಿಯೂರಪ್ಪ ಬದಲಾವಣೆ ಮಾಡುವ ಕಠಿಣ ನಿಲುವು ಕೈಗೊಂಡಿದ್ದೆ ಆದಲ್ಲಿ, ಉತ್ತರ ಕರ್ನಾಟಕದವರಿಗೆ ಅವಕಾಶ ನೀಡಬೇಕೆಂದು ಹೇಳಿದರು.

ಬದಲಾವಣೆ ಬಯಸಿದ್ದೆ ಆದಲ್ಲಿ ಪಂಚಮಸಾಲಿ ಸಮುದಾಯದ ಮುರುಗೇಶ್ ನಿರಾಣಿ ಅವರಿಗೆ ಸಿಎಂ ಸ್ಥಾನ ನೀಡಿ ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss