ಹೊಸದಿಗಂತ ವರದಿ,ಕಲಬುರಗಿ:
ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಗುರುವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರಿನಲ್ಲಿ ಕಮಲ ಅರಳಿದ್ದು ಅತ್ಯಂತ ಸಂತಸದ ವಿಚಾರವಾಗಿದೆ. ಪಾಲಿಕೆಯ ಮೇಯರ್ ಆಗಿ ಬಿಜೆಪಿಯ ವಿಶಾಲ್ ದರ್ಗಿ, ಉಪ ಮೇಯರ್ ಆಗಿ ಶಿವಾನಂದ್ ಪಿಸ್ತಿ ಆಯ್ಕೆಯಾಗಿದ್ದಾರೆ. ಈ ಮೂಲಕ ಬಿಜೆಪಿ ಕಲಬುರಗಿ ಪಾಲಿಕೆಯ ಗದ್ದುಗೆಗೇರಿದೆ ಎಂದು ಅವರು ಅಭಿನಂದನೆ ಸೂಚಿಸಿದ್ದಾರೆ.