ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕಾವೇರಿ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಕೆಆರ್‌ಎಸ್, ಕಬಿನಿ ಹಾಗೂ ಹೇಮಾವತಿ ಜಲಾಶಯಗಳ ಮೇಲ್ಭಾಗದ ಜಲಾಯನ ಪ್ರದೇಶಗಳಲ್ಲಿ ವಾಡಿಕೆಯಷ್ಟು ಮಳೆಯಾಗದೆ ಡ್ಯಾಂಗಳು ಸಂಪೂರ್ಣವಾಗಿ ಭರ್ತಿಯಾಗಿಲ್ಲ. ಹೀಗಿದ್ದರೂ ತಮಿಳುನಾಡಿಗೆ 10 ಸಾವಿರ ಕ್ಯುಸೆಕ್ ನೀರು ಬಿಡುತ್ತಿರುವುದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಿದೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀರು ಬಿಡಲು ಹೇಳಿದ್ದು, ಅಂತೆಯೇ ಸರ್ಕಾರ ನೀಡು ಬಿಡುತ್ತಿದೆ. ಈ ಬಗ್ಗೆ ಬಿಜೆಪಿ ಹಾಗೂ ಜೆಡಿಎಸ್ ಕಿಡಿಕಾರಿದ್ದು, ಇಂದು ಮಂಡ್ಯದಲ್ಲಿ ಬಿಜೆಪಿ ನಾಯಕರು ಸಭೆ ನಡೆಸಲಿದ್ದಾರೆ. ಸುತ್ತಮುತ್ತಲಿನ ಜಿಲ್ಲೆಗಳ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಂಡ್ಯದ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ.
ಈ ಬಗ್ಗೆ ಕಾಂಗ್ರೆಸ್ ಸರ್ಕಾರ ಸ್ಪಷ್ಟನೆ ನೀಡಿದ್ದು, ನೀರು ಬಿಡುವ ಹಿಂದೆ ಯಾವುದೇ ರಾಜಕೀಯ ಇಲ್ಲ. ಕೋರ್ಟ್ ಆದೇಶದಂತೆ ನಡೆದುಕೊಂಡಿದ್ದೇವೆ ಎಂದಿದೆ.