ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬರುವ ಹರಿಯಾಣ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಕನಿಷ್ಠ 50 ಸ್ಥಾನಗಳಿಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ. ಅಭ್ಯರ್ಥಿಗಳ ಮೊದಲ ಪಟ್ಟಿ ನಾಳೆ ಬಿಡುಗಡೆಯಾಗುವ ನಿರೀಕ್ಷೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
“ನಾವು ಗರಿಷ್ಠ ಸ್ಥಾನಗಳ ಮೊದಲ ಪಟ್ಟಿಯನ್ನು ನಾಳೆ ಬಿಡುಗಡೆ ಮಾಡುತ್ತೇವೆ. ಎಲ್ಲಾ ಸ್ಥಾನಗಳ ಬಗ್ಗೆ ಚರ್ಚೆ ನಡೆಸಲಾಗಿದ್ದರೂ ನಾವು ಸುಮಾರು 50 ಅಭ್ಯರ್ಥಿಗಳ ಪಟ್ಟಿಯನ್ನು ಮೊದಲು ಬಿಡುಗಡೆ ಮಾಡುತ್ತೇವೆ ಮತ್ತು ಉಳಿದವುಗಳನ್ನು ನಂತರ ಪ್ರಕಟಿಸಲಾಗುವುದು” ಎಂದು ಮೂಲಗಳು ತಿಳಿಸಿವೆ.
ಇದಕ್ಕೂ ಮುನ್ನ ದೆಹಲಿಯಲ್ಲಿರುವ ಹರಿಯಾಣದ ಮಾಜಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ನಿವಾಸದಲ್ಲಿ ನಿನ್ನೆ ರಾತ್ರಿ 7.30 ರ ಸುಮಾರಿಗೆ ಪ್ರಮುಖ ಸಭೆ ನಡೆಯಿತು. ಸಭೆಯಲ್ಲಿ ಬಿಜೆಪಿ ಹರಿಯಾಣ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಚುನಾವಣಾ ಸಹ ಪ್ರಭಾರಿ ಬಿಪ್ಲಬ್ ದೇವ್, ರಾಜ್ಯ ಉಸ್ತುವಾರಿ ಸತೀಶ್ ಪುನಿಯಾ ಮತ್ತು ರಾಜ್ಯ ಸಹ ಉಸ್ತುವಾರಿ ಸುರೇಂದರ್ ನಗರ್ ಇತರರು ಉಪಸ್ಥಿತರಿದ್ದರು.
ಸೆಪ್ಟೆಂಬರ್ 2 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಬಿಜೆಪಿ ಹರಿಯಾಣ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಚುನಾವಣಾ ಸಹ ಪ್ರಭಾರಿ ಬಿಪ್ಲಬ್ ದೇವ್, ರಾಜ್ಯ ಉಸ್ತುವಾರಿ ಸತೀಶ್ ಪುನಿಯಾ, ರಾಜ್ಯ ಸಹ ಉಸ್ತುವಾರಿ ಸುರೇಂದರ್ ನಗರ ಮತ್ತು ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್ ಭೇಟಿಯಾಗಿ ಮಾತುಕತೆ ನಡೆಸಿದರು.