March 27, 2026
Friday, March 27, 2026
spot_img

ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಗುತ್ತಿಗೆದಾರರಿಂದ ಕಮಿಷನ್‌ ರೀತಿ ಐದು ಲಕ್ಷ ರೂಪಾಯಿ ಹಣ ಪಡೆಯುತ್ತಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್‌ ಹ್ಯಾಂಡ್‌ ಆಗಿ ಹಿಡಿದಿದ್ದಾರೆ.

ಗದಗ ಜಿಲ್ಲೆಯ ಲಕ್ಷ್ಮೀಶ್ವರ ಪಟ್ಟಣದಲ್ಲಿರುವ ಬಾಲಾಜಿ ಆಸ್ಪತ್ರೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಶಾಸಕ ಚಂದ್ರು ಲಮಾಣಿ ಸ್ವತಃ ವೈದ್ಯರು ಕೂಡ ಆಗಿದ್ದು ಬಾಲಾಜಿ ಆಸ್ಪತ್ರೆ ಚಂದ್ರು ಲಮಾಣಿ ಅವರ ಒಡೆತನ ಆಸ್ಪತ್ರೆಯಾಗಿದೆ.

ಲೋಕಾಯುಕ್ತ ಅಧಿಕಾರಿಗಳ ದಾಳಿ ವೇಳೆ ಶಾಸಕ ಚಂದ್ರು ಲಮಾಣಿ ಹಾಗೂ ಅವರ ಇಬ್ಬರು ಪಿಎಗಳಾದ ಮಂಜುನಾಥ್ ಹಾಗೂ ಗುರು ಸಹ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸದ್ಯ ಮೂವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !