Friday, January 9, 2026

ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ ಫೇಸ್‌ಬುಕ್, ಇನ್ಸ್ಟಾ ಹ್ಯಾಕ್: ಹುಡುಗಿಯರಿಗೆ ಮೆಸೇಜ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಫೇಸ್‌ಬುಕ್, ಇನ್ಸ್ಟಾಗ್ರಾಂ ಖಾತೆಯನ್ನು ಹ್ಯಾಕ್ ಮಾಡಿ ಯುವತಿಯೊಬ್ಬರಿಗೆ ಸಂದೇಶ ಕಳುಹಿಸಿರುವ ಕುರಿತು ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ ಸೈಬರ್ ಕ್ರೈಂಗೆ ದೂರು ನೀಡಿದ್ದಾರೆ.

ಜಯನಗರ ಬಿಜೆಪಿ ಶಾಸಕ ಸಿ.ಕೆ.ರಾಮಮೂರ್ತಿ ಹೆಸರಿನಲ್ಲಿ ನಕಲಿ ಫೇಸ್ ಬುಕ್, ಇನ್ಸ್ಟಾ ಖಾತೆ ಸೃಷ್ಟಿಸಿ ಮಾಡಿ ಹಲವರಿಗೆ ಮೆಸೇಜ್ ಕಳುಹಿಸಲಾಗಿದೆ. ಶಾಸಕ ಸಿ.ಕೆ. ರಾಮಮೂರ್ತಿ ಹೆಸರಿನಲ್ಲಿ ಮೆಸೇಜ್ ಹಿನ್ನೆಲೆ ಬೆಂ.ದಕ್ಷಿಣ ಸೈಬರ್ ಪೊಲೀಸ್ ಠಾಣೆಗೆ ಶಾಸಕ ದೂರು ನೀಡಿದ್ದಾರೆ. ಅಲ್ಲದೇ ಮೊಬೈಲ್ ಹ್ಯಾಕ್ ಆಗಿದೆ ಎಂದು ಸಿ.ಕೆ ರಾಮೂರ್ತಿ ಸ್ಪಷ್ಟನೆ ನೀಡಿದ್ದಾರೆ. 

ಇದನ್ನೂ ಓದಿ: ಬಳ್ಳಾರಿ ಬ್ಯಾನರ್‌ ಗಲಾಟೆ ಪ್ರಕರಣ: ಐಜಿಪಿ ವರ್ತಿಕಾ ಕಟಿಯಾರ್ ವರ್ಗಾವಣೆ

ಶಾಸಕರ ಅಧಿಕೃತ ಇನ್ಸ್ಟಾ ಪೇಜ್‌ನಿಂದ ಯುವತಿಗೆ ಹಾಯ್, ಹಲೋ ಗುಡ್ ಮಾರ್ನಿಂಗ್, ಗುಡ್ ಈವ್ನಿಂಗ್, ರೀಲ್ಸ್ ಸೂಪರ್ ಅಂತಾ ಸಂದೇಶ ರವಾನಿಸಲಾಗಿದೆ. ಸದ್ಯ ಈ ಸಂದೇಶ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಹಿನ್ನೆಲೆ ಶಾಸಕ ಸಿ.ಕೆ ರಾಮಮೂರ್ತಿ ಸೈಬರ್ ಕ್ರೈಂಗೆ ದೂರು ನೀಡಿ ಹ್ಯಾಕರ್ಸ್‌ ಹಾಗೂ  ನಕಲಿ ಖಾತೆ ಸೃಷ್ಟಿಸಿದವರ ವಿರುದ್ಧ ಕ್ರಮಕೈಗೊಳ್ಳುವಂತೆ ಸೂಚಿಸಿದ್ದಾರೆ.

ಇನ್ಸ್ಟಾಗ್ರಾಂ ಖಾತೆ ಹ್ಯಾಕ್ ಮಾಡಿ ಯುವತಿಗೆ ಮೆಸೇಜ್ ಕಳುಹಿಸಿ ನನ್ನ ಹೆಸರಿಗೆ ಮಸಿ ಬಳಿಯುವ ಕೆಲಸ ಆಗಿದೆ. ಇದು ಕಾಂಗ್ರೆಸ್ ಐಟಿ ಟೀಂನ ಕೆಲಸ ಎಂದು ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ ಕಾಂಗ್ರೆಸ್ ವಿರುದ್ಧ ಆರೋಪ ಹೊರಿಸಿದ್ದಾರೆ.

error: Content is protected !!