Saturday, April 1, 2023

Latest Posts

BREAKING NEWS | ಕೆ ಎಸ್ ಡಿ ಎಲ್ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೆಎಸ್‌ಡಿಎಲ್ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ ನೀಡಿದ್ದಾರೆ.

ನಿನ್ನೆ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಶಾಸಕರ ಪುತ್ರ, ಬಿಡಬ್ಲೂಎಸ್ ಎಸ್‌ಬಿ ಮುಖ್ಯ ಲೆಕ್ಕಾಧಿಕಾರಿ ಕೆಎಎಸ್ ಅಧಿಕಾರಿ ಮಾಡಾಳ್ ಪ್ರಶಾಂತ್ ಬಿದ್ದಿದ್ದು, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಾಗಿದೆ.

ಲೋಕಾಯುಕ್ತ ಬಲೆಗೆ ಬಿದ್ದ ಪ್ರಶಾಂತ್ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದು, ಆರು ಕೋಟಿ ರೂಪಾಯಿ ನಗದು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಇಂದು ಬೆಳಗ್ಗಿನವರೆಗೂ ಶೋಧ ಜಾರಿಯಲ್ಲಿತ್ತು.

ಇದು ನಮ್ಮ ವಿರುದ್ಧ ನಡೆದ ಷಡ್ಯಂತ್ರ, ದಾಳಿಗೂ ನನಗೂ ಸಂಬಂಧವಿಲ್ಲ. ಆದರೂ ನನ್ನ ಮೇಲೆ ಆಪಾದನೆ ಬಂದಿರುವುದರಿಂದ ರಾಜೀನಾಮೆ ನೀಡುತ್ತಿದ್ದೇನೆ ಎಂದು ವಿರೂಪಾಕ್ಷಪ್ಪ ರಾಜೀನಾಮೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!