Friday, June 9, 2023

Latest Posts

ತಡರಾತ್ರಿವರೆಗೆ ವಿಚಾರಣೆ ಎದುರಿಸಿದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪರನ್ನು ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಬಂಧಿಸಿ ತಡರಾತ್ರಿವರೆಗೆ ವಿಚಾರಣೆ ನಡೆಸಿದ್ದಾರೆ.

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಸಂಸ್ಥೆಯಲ್ಲಿ ನಡೆಸಿದ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಆರೋಪಿಯಾಗಿದ್ದಾರೆ.

ನಿರೀಕ್ಷಣಾ ಜಾಮೀನು ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಬೀಳುತ್ತಿದ್ದಂತೆಯೇ ಮಾಡಾಳ್ ನಾಪತ್ತೆಯಾಗಿದ್ದಾರೆ ಎನ್ನಲಾಗಿತ್ತು. ಆದರೆ ನಿನ್ನೆ ಇವರನ್ನು ಬಂಧಿಸಲಾಗಿದೆ.

ತುಮಕೂರಿನ ಕ್ಯಾತ್ಸಂದ್ರದಲ್ಲಿ ಮಾಡಾಳ್ ಬಂಧನವಾಗಿತ್ತು. ಕೆಎಎಸ್ ಅಧಿಕಾರಿಯಾಗಿರುವ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ತಂದೆ ಪರವಾಗಿ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ರು. ಇಂದು ಕೋರ್ಟ್‌ಗೆ ಮಾಡಾಳ್‌ರನ್ನು ಹಾಜರುಪಡಿಸಿ ಕಸ್ಟಡಿ ಕೇಳುವ ನಿರೀಕ್ಷೆ ಇದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!