ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಶಾಸಕ ಮುನಿರತ್ನ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ನಾಳೆಗೆ ಆದೇಶ ಕಾಯ್ದಿರಿಸಿದೆ.
ಜೀವ ಬೆದರಿಕೆ, ಜಾತಿ ನಿಂದನೆ ಕೇಸ್ ನಲ್ಲಿ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದಂತಹ ಕೋರ್ಟ್ ನಾಳೆಗೆ ಆದೇಶ ಕಾಯ್ದಿರಿಸಿದೆ .
ಜೀವ ಬೆದರಿಕೆ, ಜಾತಿ ನಿಂದನೆ ಕೇಸ್ ನಲ್ಲಿ ಎರಡು ದಿನ ಪೊಲೀಸ್ ಕಷ್ಟಡಿಗೆ ಪಡೆದಿದ್ದ ಪೊಲೀಸರು ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ 82ನೇ ಸಿಸಿಹೆಚ್ ಕೋರ್ಟ್ ಗೆ ಹಾಜರು ಪಡಿಸಿದ್ದರು. ಈ ವೇಳೆ ಮುನಿರತ್ನ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್ ಒಂದು ದಿನದವರೆಗೆ ಮುನಿರತ್ನ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿತ್ತು.ನ್ಯಾಯಾಂಗ ಬಂಧನ ಹಿನ್ನೆಲೆಯಲ್ಲಿ ಪೊಲೀಸರು ಮುನಿರತ್ನ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಿದ್ದರು.