ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆಗೆ ಬಿಜೆಪಿ ಪಟ್ಟಿ ಬಿಡುಗಡೆಯಾಗಿದ್ದು, ವಿರೋಧದ ನಡುವೆಯೂ ಬೀದರ್ ಟಿಕೆಟ್ ಭಗವಂತ ಖೂಬಾಗೆ ಸಿಕ್ಕಿದೆ. ಈ ಬೆನ್ನಲ್ಲೇ ಇದೀಗ ಶಾಸಕ ಪ್ರಭು ಚೌಹಾಣ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುರುವಾರ ಸಂಜೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ ಎಂದು ವೈದ್ಯರು ಹೇಳಿದ್ದಾರೆ.