ಚುನಾವಣಾ ಕಣದಿಂದ ಹಿಂದೆ ಸರಿದ ಬಿಜೆಪಿ ಶಾಸಕ ರವೀಂದ್ರನಾಥ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್ :
 
ಕುಂದಾಪುರದ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಚುನಾವಣಾ ಕಣದಿಂದ ಹಿಂದೆ ಸರಿದ ಬಳಿಕ ಇದೀಗ ಬಿಜೆಪಿ ಶಾಸಕ ಎಸ್‌.ಎ ರವೀಂದ್ರನಾಥ್‌ ಅವರು ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ.

ಪ್ರಸಕ್ತ ದಾವಣಗೆರೆ ಉತ್ತರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. ಸೋಮವಾರವಷ್ಟೇ ಕುಂದಾಪುರದ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ತಾನು ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದರು.

ಇದೀಗ ಎಸ್‌.ಎ ರವೀಂದ್ರನಾಥ್‌ ಅವರು ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದಿದ್ದಾರೆ.

ದಾವಣಗೆರೆ ಜಿಲ್ಲೆಯ ಎಸ್.ಎ.ರವೀಂದ್ರನಾಥ್ ಇದುವರೆಗೂ 5 ಬಾರಿ ಶಾಸಕರಾಗಿದ್ದಾರೆ. 1994, 1999, 2004 ರಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರದಿಂದ ಗೆದ್ದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!