Sunday, October 19, 2025

ಬಿಜೆಪಿ ಶಾಸಕ ಶಿವಾಜಿ ಕಾರ್ಡಿಲೆ ಹೃದಯಾಘಾತದಿಂದ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಹಾರಾಷ್ಟ್ರದ ಅಹಿಲ್ಯಾನಗರ ಜಿಲ್ಲೆಯ ರಾಹುರಿ ಕ್ಷೇತ್ರದ ಬಿಜೆಪಿ ಶಾಸಕ ಶಿವಾಜಿ ಕಾರ್ಡಿಲೆ ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ.

ಅವರಿಗೆ 66 ವರ್ಷ ವಯಸ್ಸಾಗಿತ್ತು. ಶಿವಾಜಿ ಅವರಿಗೆ ಮುಂಜಾನೆ ಹೃದಯಾಘಾತ ಸಂಭವಿಸಿತು. ತಕ್ಷಣ ಅವರನ್ನು ಅಹಿಲ್ಯಾನಗರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅದಾಗಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು ಎಂದು ಕುಟುಂಬ ಮೂಲಗಳು ತಿಳಿಸಿವೆ. ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ.

ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿದ್ದ ಶಿವಾಜಿ ಅವರು, ಕಳೆದ ಕೆಲ ಸಮಯಗಳಿಂದ ಸಾರ್ವಜನಿಕ ಜೀವನದಿಂದ ದೂರವೇ ಉಳಿದಿದ್ದರು. ಶಿವಾಜಿ ಕಾರ್ಡಿಲೆ , ಆರು ಬಾರಿ ಶಾಸಕರಾಗಿದ್ದಾರೆ. ಅದರಲ್ಲೂ ಐದು ಬಾರಿ ಸತತ ಗೆಲುವು ದಾಖಲಿಸಿದ್ದಾರೆ. 2019ರಲ್ಲಿ ಎನ್‌ಸಿಪಿ ಅಭ್ಯರ್ಥಿ ಎದುರು ಪರಾಭವಗೊಂಡಿದ್ದರು. 2024ರಲ್ಲಿ ಮತ್ತೆ ಶಾಸಕರಾಗಿ ಆಯ್ಕೆಯಾದರು.

ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ವಿಧಾನಸೌಧ ಪ್ರವೇಶಿಸಿದ ಶಿವಾಜಿ ಅವರು ನಂತರ ಕಾಂಗ್ರೆಸ್‌ನಿಂದ ಹಾಗೂ ಅವಿಭಜಿತ ಎನ್‌ಸಿಪಿಯಿಂದಲೂ ಸ್ಪರ್ಧಿಸಿ ಶಾಸಕರಾಗಿದ್ದರು.

error: Content is protected !!