ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಶಾಸಕ ಸುರೇಶ್ ಕುಮಾರ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ರೂಪಾಂತರಿ ಚಿಕುನ್ ಗುನ್ಯಾ ಸೋಂಕು ತಗುಲಿದ ಕಾರಣ ಸುರೇಶ್ ಕುಮಾರ್ ಶೇಷಾದ್ರಿಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು ಐಸಿಯು ಘಟಕದಲ್ಲಿ ಸುರೇಶ್ ಕುಮಾರ್‌ಗೆ ಚಿಕಿತ್ಸೆ ನೀಡಿದ್ದಾರೆ. ಈಗ ಸುರೇಶ್ ಕುಮಾರ್ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.
ಇನ್ನು ತಮ್ಮ ಅನಾರೋಗ್ಯ ಸಂಬಂಧ ವದಂತಿ ಹಬ್ಬಿದ ಹಿನ್ನೆಲೆ ಸುರೇಶ್ ಕುಮಾರ್ ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ. ನಾನು ಆರೋಗ್ಯವಾಗಿದ್ದೇನೆ. ಚಿಕುನ್ ಗುನ್ಯಾ ನನ್ನನ್ನು ಕೆಲ ದಿನಗಳಿಂದ ಬಾಧಿಸಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದೇನೆ. ಜ್ವರದಿಂದ ಈಗ ಸಂಪೂರ್ಣ ಚೇತರಿಕೆ ಕಂಡಿದ್ದು, ಗುಣಮುಖನಾಗಿದ್ದೇನೆ ಹಾಗೂ ಸದ್ಯಕ್ಕೆ ವಿಶ್ರಾಂತಿಯಲ್ಲಿದ್ದೇನೆ. ಹಿತೈಶಿಗಳು ಅನಗತ್ಯ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಮಾಧ್ಯಮ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ.