Tuesday, March 21, 2023

Latest Posts

ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿ ಶಾಸಕರನ್ನು ಹೆಚ್ಚು ಗೆಲ್ಲಿಸುವುದೇ ನನ್ನ ಉದ್ದೇಶ: ಶ್ರೀ ರಾಮುಲು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜಕೀಯದಲ್ಲಿ ಸ್ನೇಹವನ್ನು ಪರಿಗಣಿಸುವುದಿಲ್ಲ. ಅಭಿವೃದ್ಧಿ ಕೆಲಸ ಮುಂದಿಟ್ಟುಕೊಂಡು ಜನರಿಂದ ಮತ ಕೇಳುತ್ತೇವೆ ಎಂದು ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ರಾಜಕೀಯ ಮತ್ತು ಸ್ನೇಹವನ್ನು ಒಂದೇ ತಕ್ಕಡಿಯಲ್ಲಿ ಇಟ್ಟುಕೊಳ್ಳುವುದಿಲ್ಲ. ರಾಜಕೀಯ ವಿಷಯದಲ್ಲಿ ನನ್ನದೇ ಆದ ಹೋರಾಟ ಇರುತ್ತದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚು ಬಿಜೆಪಿ ಶಾಸಕರನ್ನು ಗೆಲ್ಲಿಸುವುದು ನನ್ನ ಉದ್ದೇಶ. ಈ ವಿಷಯದಲ್ಲಿ ರಾಜಕೀಯವೇ ಮುಖ್ಯ ಸ್ನೇಹವಲ್ಲ ಎಂದು ಅವರು ಹೇಳಿದ್ದಾರೆ.

ಅವರು ವಲ್ಲರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ನಮ್ಮದೇನಿದ್ದರೂ ಬಿಜೆಪಿ ಗೆಲುವಿನ ಯತ್ನ. ಸೋಮಶೇಖರ ರೆಡ್ಡಿ ಅವರ ಸ್ಪರ್ಧೆ ಬಗ್ಗೆ ಅನುಮಾನ ಬೇಡ. ಬಳ್ಳಾರಿ ನಗರದಿಂದಲೇ ಸ್ಪರ್ಧೆ ಮಾಡುತ್ತಾರೆ. ಚುನಾವಣೆ ದಿನಾಂಕ ಘೋಷಣೆ ಮಾಡಿದ ನಂತರ ಅಭ್ಯರ್ಥಿಗಳ ಘೋಷಣೆ ಮಾಡಲಾಗುವುದು. ಬಳ್ಳಾರಿ ಗ್ರಾಮೀಣ ಮತ್ತು ಸಂಡೂರು ಕ್ಷೇತ್ರದಿಂದ ಸ್ಪರ್ಧೆ ಮಾಡಲು ನಾನು ಬಯಸಿದ್ದೇನೆ ಅಂತಿಮವಾಗಿ ಪಕ್ಷದ ನಿರ್ಧಾರಕ್ಕೆ ಬದ್ಧ ಎಂದು ಅವರು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!