ಬಿಜೆಪಿ ಸಂಸದ ಬಿಎನ್ ಬಚ್ಚೇಗೌಡ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಬಿಎನ್ ಬಚ್ಚೇಗೌಡ (Bache Gowda) ಮಂಗಳವಾರ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಣೆ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಕಾರ ಪಕ್ಷದಲ್ಲಿ ಎಪ್ಪತ್ತು ವರ್ಷ ವಯಸ್ಸಿಗೆ ನಿವೃತ್ತಿಯಾಗಬೇಕು. ಈಗ ನನಗೆ ಎಂಬತ್ತೊಂದು ವರ್ಷ ವಯಸ್ಸಾಗಿದೆ. ಅರ್ಥಪೂರ್ಣ ಸಮಾರಂಭವನ್ನೂ‌ ಆಚರಣೆ ಮಾಡಿಕೊಂಡಿದ್ದೇವೆ. ನನಗೆ ಪಕ್ಷದಲ್ಲಿ ಟಿಕೆಟ್ ಕೊಡುವುದಿಲ್ಲ ಅಂತ ಪ್ರಧಾನಿ ಮೋದಿ ಹೇಳಿಬಿಟ್ಟಿದ್ದಾರೆ. ಹೀಗಾಗಿ ನಿವೃತ್ತಿಯಾಗುತ್ತಿದ್ದೇನೆ ಎಂದು ಹೇಳಿದ್ದಾರೆ.

ಮೋದಿ ಅವರು ಬಿಜೆಪಿಯಲ್ಲಿ ಒಂದು ಕುಟುಂಬಕ್ಕೆ ಒಂದು ಟಿಕೆಟ್ ಎಂದು ಘೋಷಣೆ ಮಾಡಿದ್ದಾರೆ. ತಂದೆ, ಮಗ, ಮೊಮ್ಮಗ, ಮೊಮ್ಮಗಳು ರಾಜಕಾರಣಕ್ಕೆ ಅವಕಾಶ ಇಲ್ಲ ಎಂದು ಹೇಳಿದ್ದಾರೆ. ಹಿಗಾಗಿ ನಿವೃತ್ತಿಯಾಗುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

ನಾನು ಚುನಾವಣಾ ರಾಜಕೀಯದಲ್ಲಿ ಇರದಿದ್ದರೂ ರಾಜಕಾರಣದಲ್ಲಿ ಸಕ್ರಿಯವಾಗಿ ಕೆಲಸ ಮಾಡಿಕೊಂಡು ಇರುತ್ತೇನೆ ಎಂದು ಅವರು ಹೇಳಿದ್ದಾರೆ.

ಬಿಎನ್ ಬಚ್ಚೇಗೌಡ ಅವರ ಮಗ ಶರತ್​​ ಬಚ್ಚೇಗೌಡ ಕಾಂಗ್ರೆಸ್ ಶಾಸಕರಾಗಿದ್ದಾರೆ. ಶರತ್ ಕುಮಾರ್ ಬಚ್ಚೇಗೌಡ ಹೊಸಕೋಟೆಯಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ ಮತ್ತು ಹಾಲಿ ಸಚಿವ ಎಂಟಿಬಿ ನಾಗರಾಜ್ ಅವರನ್ನು ಸೋಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!