ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಖಾಂಡ್ವಾ ಕ್ಷೇತ್ರದ ಬಿಜೆಪಿ ಸಂಸದ ನಂದಕುಮಾರ್ ಸಿಂಗ್ ಚೌಹಾಣ್ ಕೊರೋನಾ ಸೋಂಕಿನಿಂದ ಬಳಲುತ್ತಿದ್ದು, ಸೋಮವಾರ ರಾತ್ರಿ ನಿಧನರಾಗಿದ್ದಾರೆ.
ನಂದಕುಮಾರ್ ಅವರು ದೆಹಲಿ ಎನ್ ಸಿಆರ್ ನ ಮೇದಾಂತಾ ಆಸ್ಪತ್ರೆಯಲ್ಲಿ ಕರೋನಾ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
ನಂದಕುಮಾರ್ ಅವರಿಗೆ ಜ.11 ರಂದು ಕೊರೋನಾ ಸೋಂಕು ದೃಢಪಟ್ಟಿತ್ತು. ಬಳಿಕ ಅವರನ್ನು ಭೋಪಾಲ್ ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಡುತ್ತಿದ್ದ ಕಾರಣ ದೆಹಲಿಯ ಮೇದಾಂತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.