ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸ್ಥಾಯಿ ಸಮಿತಿ ರಚಿಸಲಾಗಿದ್ದು, ಇಂದು ಪಟ್ಟಿ ಬಿಡುಗಡೆ ಮಾಡಲಾಗಿದೆ. ಇದೇ ವೇಳೆ ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಸಂಸದ ಡಾ. ಕೆ.ಸುಧಾಕರ್ ಅವರನ್ನು ಸಂಸದೀಯ ಹಣಕಾಸು ಸ್ಥಾಯಿ ಸಮಿತಿ ಸದಸ್ಯರನ್ನಾಗಿ ನೇಮಿಸಲಾಗಿದೆ.
ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡುವ ಮೂಲಕ ಡಾ.ಕೆ.ಸುಧಾಕರ್ಗೆ ಅಭಿನಂದನೆ ತಿಳಿಸಿದೆ.
ಬಿಜೆಪಿಯ ಭರ್ತೃಹರಿ ಮಹತಾಬ್ ಅವರನ್ನು ಹಣಕಾಸು ಸ್ಥಾಯಿ ಸಮಿತಿಯ ಅಧ್ಯಕ್ಷರನ್ನಾಗಿ ಮತ್ತು ಶಶಿ ತರೂರ್ ಅವರನ್ನು ವಿದೇಶಾಂಗ ವ್ಯವಹಾರಗಳ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.