ಸಕ್ರಿಯ ರಾಜಕೀಯಕ್ಕೆ ಬಿಜೆಪಿ ಸಂಸದ ಗೌತಮ್ ಗಂಭೀರ್ ಗುಡ್ ಬೈ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಕ್ರಿಯ ರಾಜಕೀಯದಿಂದ ಬಿಜೆಪಿ ಸಂಸದ ಗೌತಮ್ ಗಂಭೀರ್ ದೂರ ಉಳಿಯುವ ಸುಳಿವು ನೀಡಿದ್ದಾರೆ. ಪೂರ್ವ ದೆಹಲಿ ಕ್ಷೇತ್ರವನ್ನು ಪ್ರತಿನಿಧಿಸುವ ಮಾಜಿ ಕ್ರಿಕೆಟಿಗ, ತಮಗೆ ಕ್ರಿಕೆಟ್ ಕಮಿಟ್‌ಮೆಂಟ್‌ಗಳಿರುವ ಕಾರಣ ತಾವು ರಾಜಕೀಯದಿಂದ ಹೊರ ಹೋಗಲು ಬಯಸಿರುವುದಾಗಿ ತಿಳಿಸಿದ್ದಾರೆ.

ಮಾರ್ಚ್ 2019ರಲ್ಲಿ ಬಿಜೆಪಿ ಸೇರಿದ ಅವರು ಅಂದಿನಿಂದ ದೆಹಲಿಯಲ್ಲಿ ಪಕ್ಷದ ಪ್ರಮುಖ ಮುಖವಾಗಿದ್ದಾರೆ. ಈ ತಿಂಗಳ ಕೊನೆಯಲ್ಲಿ ಪ್ರಾರಂಭವಾಗುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ ಮುಂಬರುವ ಆವೃತ್ತಿಯಲ್ಲಿ ಅವರು ಕೋಲ್ಕತ್ತಾ ನೈಟ್ ರೈಡರ್ಸ್ ಮಾರ್ಗದರ್ಶಕರಾಗಿ ಕಾಣಿಸಿಕೊಳ್ಳಲಿದ್ದಾರೆ.

ಈ ಹಿನ್ನೆಲೆಯಲ್ಲಿ ರಾಜಕೀಯ ತೊರೆಯಲು ನಿರ್ಧರಿಸುವ ಸಂಸದ, ಬಿಜೆಪಿ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರ ಬಳಿ ತಮ್ಮನ್ನು ರಾಜಕೀಯ ಕರ್ತವ್ಯಗಳಿಂದ ಮುಕ್ತಗೊಳಿಸುವಂತೆ ಒತ್ತಾಯಿಸಿದ್ದಾಗಿ ಕೇಳಿರುವುದಾಗಿ X ನಲ್ಲಿ ತಿಳಿಸಿದ್ದಾರೆ.

‘ನನ್ನ ರಾಜಕೀಯ ಕರ್ತವ್ಯಗಳಿಂದ ನನ್ನನ್ನು ಮುಕ್ತಗೊಳಿಸುವಂತೆ ನಾನು ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಜೀ ಅವರಿಗೆ ಮನವಿ ಮಾಡಿದ್ದೇನೆ. ಇದರಿಂದಾಗಿ ನಾನು ನನ್ನ ಮುಂಬರುವ ಕ್ರಿಕೆಟ್ ಬದ್ಧತೆಗಳ ಮೇಲೆ ಗಮನ ಕೇಂದ್ರೀಕರಿಸುತ್ತೇನೆ. ಜನರ ಸೇವೆ ಮಾಡಲು ನನಗೆ ಅವಕಾಶ ನೀಡಿದ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಯವರಿಗೆ ನಾನು ಪ್ರಾಮಾಣಿಕವಾಗಿ ಧನ್ಯವಾದಗಳು. ಜೈ ಹಿಂದ್,’ ಎಂದು ಗಂಭೀರ್ ಎಕ್ಸ್ ನಲ್ಲಿ ಬರೆದಿದ್ದಾರೆ.

ಗಂಭೀರ್ ಮಾರ್ಚ್ 2019ರಲ್ಲಿ ಬಿಜೆಪಿ ಸೇರಿದರು ಮತ್ತು ಅಂದಿನಿಂದ ದೆಹಲಿಯಲ್ಲಿ ಪಕ್ಷದ ಪ್ರಮುಖ ಮುಖವಾಗಿದ್ದಾರೆ. ಅವರು 2019ರ ಲೋಕಸಭಾ ಚುನಾವಣೆಯಲ್ಲಿ ಪೂರ್ವ ದೆಹಲಿ ಸ್ಥಾನಕ್ಕೆ ಸ್ಪರ್ಧಿಸಿ 6,95,109 ಮತಗಳ ಗಣನೀಯ ಅಂತರದಿಂದ ಗೆದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!