Monday, October 2, 2023

Latest Posts

ಬಿಜೆಪಿ ಸಂಸದ ಗಿರೀಶ್ ಬಾಪಟ್ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರದ ಪುಣೆಯ ಬಿಜೆಪಿ ಸಂಸದ ಗಿರೀಶ್ ಬಾಪಟ್ ಇಂದು ನಿಧನರಾಗಿದ್ದಾರೆ.
ಕೆಲವು ತಿಂಗಳಿನಿಂದ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದ ಬಾಪಟ್ ಅವರು ಪುಣೆಯ ದೀನಾನಾಥ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಪ್ರಧಾನಿ ಮೋದಿ ಬಾಪಟ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಕಳೆದ ಎರಡು ದಿನದಿಂದ ಆರೋಗ್ಯ ಕ್ಷೀಣಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಡಯಾಲಿಸಿಸ್ ಕೂಡ ಮಾಡಿಸಲಾಗಿತ್ತು. ಆಕ್ಸಿಜನ್ ಮಾಸ್ಕ್ ಧರಿಸಿಯೇ ಎಲ್ಲೆಡೆ ಪ್ರಚಾರ ಕಾರ್ಯ ಆರಂಭಿಸಿದ್ದರು.

ಬಾಪಟ್ ಅವರು ಶ್ರದ್ಧೆಯಿಂದ ದೇಶಕ್ಕಾಗಿ ದುಡಿದವರು, ವಿನಮ್ರ ಹಾಗೂ ಶ್ರಮಜೀವಿ ಬಾಪಟ್ ಅವರ ಅಗಲಿಕೆ ಅಪಾರ ನೋವು ತಂದಿದೆ. ಮಹಾರಾಷ್ಟ್ರದ ಅಭಿವೃದ್ಧಿಗಾಗಿ ವ್ಯಾಪಕವಾಗಿ ದುಡಿದಿದ್ದರು. ಅವರ ಕುಟುಂ ಮತ್ತು ಬೆಂಬಲಿಗರಿಗೆ ಸಂತಾಪ. ಓಂ ಶಾಂತಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!