ʻಮುಂದಿನ ಚುನಾವಣೆಯಲ್ಲಿ ಈ ಕ್ಷೇತ್ರ ಬಿಟ್ಟು, ಬೇರಾವ ಕ್ಷೇತ್ರದಿಂದಲೂ ಸ್ಪರ್ಧೆ ಮಾಡಲ್ಲʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬಾಲಿವುಡ್‌ನ ಮಾಜಿ ಸ್ಟಾರ್ ಹೀರೋಯಿನ್ ಹಾಗೂ ಬಿಜೆಪಿ ಸಂಸದೆ ಹೇಮಾ ಮಾಲಿನಿ ಮಹತ್ವದ ಘೋಷಣೆ ಮಾಡಿದ್ದಾರೆ. ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಬೇಕಾದರೆ ಈ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ, ಇಲ್ಲದಿದ್ದರೆ ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿಯುತ್ತೇನೆ ಎಂದರು. ಪ್ರಸ್ತುತ, ಹೇಮಾ ಮಾಲಿನಿ ಅವರು ಮಥುರಾ ಲೋಕಸಭಾ ಕ್ಷೇತ್ರವನ್ನು ಸಂಸದರಾಗಿ ಪ್ರತಿನಿಧಿಸುತ್ತಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಒಂಬತ್ತು ವರ್ಷಗಳಾದ ಹಿನ್ನೆಲೆಯಲ್ಲಿ ಸಂಸದೆ ಹೇಮಾ ಮಾಲಿನಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಮುಂದಿನ ಚುನಾವಣೆಯಲ್ಲಿ ಮಥುರಾ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದ ಅವರು, ಬೇರೆ ಕ್ಷೇತ್ರದಿಂದ ಸ್ಪರ್ಧಿಸುವ ಪ್ರಸ್ತಾಪವಿದ್ದರೂ ಯಾವುದೇ ಸಂದರ್ಭದಲ್ಲೂ ಒಪ್ಪುವುದಿಲ್ಲ. ಕಳೆದ ಒಂಬತ್ತು ವರ್ಷಗಳ ಅವಧಿಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅನೇಕ ಜನೋಪಯೋಗಿ ಯೋಜನೆಗಳನ್ನು ಜಾರಿಗೆ ತಂದಿದೆ. ಮೋದಿಯವರ ಆಡಳಿತದಿಂದ ದೇಶದ ಜನತೆ ಸಂತಸಗೊಂಡಿದ್ದು, ಮುಂದಿನ ಚುನಾವಣೆಯಲ್ಲೂ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಹೇಮಾ ಮಾಲಿನಿ ಅವರು 2003 ರಿಂದ 2009 ರವರೆಗೆ ರಾಜ್ಯಸಭಾ ಸಂಸದರಾಗಿದ್ದರು. 2014 ರಲ್ಲಿ ಮಥುರಾ ಲೋಕಸಭಾ ಕ್ಷೇತ್ರದಿಂದ ಗೆದ್ದಿದ್ದರು. 2019ರ ಚುನಾವಣೆಯಲ್ಲೂ ಅವರು ಮಥುರಾ ಕ್ಷೇತ್ರದಿಂದ ಸ್ಪರ್ಧಿಸಿ ಭಾರಿ ಮತಗಳಿಂದ ಗೆದ್ದಿದ್ದರು. ಮಥುರಾ ಕ್ಷೇತ್ರದಿಂದ ಸತತ ಎರಡು ಬಾರಿ ಗೆದ್ದ ನಂತರ ಮತ್ತೊಮ್ಮೆ ಮಥುರಾ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!