ಖರ್ಗೆ ಕುಟುಂಬದ ವಿರುದ್ಧ ಬಿಜೆಪಿ ಸಂಸದ ಲಹರ್ ಸಿಂಗ್ ಭ್ರಷ್ಟಾಚಾರ ಆರೋಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯಲ್ಲಿ ಪ್ರಜಾಪ್ರಭುತ್ವ ಉಳಿಸುವ ಕಾರ್ಯದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿರತರಾಗಿದ್ದರೆ, ಅವರ ಹಿತ್ತಲಿನ ‘ರಿಪಬ್ಲಿಕ್ ಆಫ್ ಕಲಬುರಗಿ’ಯಲ್ಲಿ ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರು ಏನು ಮಾಡುತ್ತಿದ್ದಾರೆಂಬುದು ಅವರಿಗೇ ತಿಳಿದಿಲ್ಲ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಲಹರ್ ಸಿಂಗ್ ಸಿರೋಯಾ ಟೀಕಿಸಿದ್ದಾರೆ.

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ಸಂಬಂಧ ಖರ್ಗೆ ಕುಟುಂಬದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಅವರು, ಖರ್ಗೆ ಹಿತ್ತಲಿನಲ್ಲೇ ನಡೆಯುತ್ತಿವೆ ಭೂ ಹಗರಣಗಳು, ಕುಟುಂಬ ಟ್ರಸ್ಟ್‌ ಹಾವಳಿ ಎಂದು ಎಕ್ಸ್ ನಲ್ಲಿ ಉಲ್ಲೇಖಿಸಿದ್ದಾರೆ.

ಆರ್‌ಟಿಐ ಕಾನೂನನ್ನು ರೂಪಿಸಿದ್ದಕ್ಕಾಗಿ ಸೋನಿಯಾ ಗಾಂಧಿ ಅವರ ತಂಡಕ್ಕೆ ಧನ್ಯವಾದಗಳು. ಖರ್ಗೆ ಫ್ಯಾಮಿಲಿ ಟ್ರಸ್ಟ್ ಹಗರಣದ ವಿವರಗಳು ಎಲ್ಲರಿಗೂ ಉಚಿತವಾಗಿ ಲಭ್ಯವಿದೆ ಎಂದು ಲಹರ್ ಸಿಂಗ್ ವ್ಯಂಗ್ಯವಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!