ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದಿನಿಂದ ನೂತನ ಸಂಸತ್ ಭವನದಲ್ಲಿ ಸಭೆಗಳು ನಡೆಯಲಿವೆ. ಈ ಸಂದರ್ಭದಲ್ಲಿ ಹಳೆ ಸಂಸತ್ ಭವನದ ನೆನಪುಗಳನ್ನು ಮೆಲುಕು ಹಾಕುತ್ತಾ ಸಂಸದರ ಗ್ರೂಪ್ ಫೋಟೋ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಬಿಜೆಪಿ ಸಂಸದರೊಬ್ಬರು ಪ್ರಜ್ಞೆ ತಪ್ಪಿದ ಘಟನೆ ನಡೆಯಿತು.
ಸಂಸದ ನರಹರಿ ಅಮೀನ್ ಗ್ರೂಪ್ ಫೋಟೋ ಸೆಷನ್ ವೇಳೆ ಪ್ರಜ್ಞೆ ತಪ್ಪಿದರು. ಸ್ವಲ್ಪ ಸಮಯದಲ್ಲೇ ಚೇತರಿಸಿಕೊಂಡು ಫೋಟೊಶೂಟ್ ಕಾರ್ಯಕ್ರಮದಲ್ಲಿ ಭಾಗಿಯಾದರು.
ಇದೇ ಮೊದಲ ಬಾರಿಗೆ ಲೋಕಸಭೆ ಮತ್ತು ರಾಜ್ಯಸಭಾ ಸಂಸದರು ಒಟ್ಟಿಗೆ ಸೇರಿ ಸಂಸತ್ ಭವನದ ಎದುರು ಗ್ರೂಪ್ ಫೋಟೋ ಸೆಷನ್‌ನಲ್ಲಿ ಭಾಗಿಯಾದರು.