ರಾಹುಲ್​ ಗಾಂಧಿಯ ವಿರುದ್ದ ಹಕ್ಕುಚ್ಯುತಿ ಮಂಡಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಭಾರತದ ನೆಲದಲ್ಲಿ ಚೀನಾದ ಸೇನಾ ಪಡೆಗಳು ಇವೆ ಎಂದು ಸಂಸತ್ತಿನಲ್ಲಿ ಹೇಳಿಕೆ ನೀಡಿದ್ದ ವಿರೋಧ ಪಕ್ಷದ ನಾಯಕ ರಾಹುಲ್​ ಗಾಂಧಿಯ ವಿರುದ್ದ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಮಂಗಳವಾರ ಹಕ್ಕುಚ್ಯುತಿ ಮಂಡಿಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದ ಮೇಲಿನ ಚರ್ಚೆಯಲ್ಲಿ ಮಾತನಾಡಿದ್ದ ರಾಹುಲ್​ ಗಾಂಧಿಯವರು ‘ಮೇಕ್ ಆನ್ ಇಂಡಿಯಾ’ ಉಪಕ್ರಮದ ವಿಫಲತೆಯಿಂದ ಚೀನಾದ ಪಡೆಗಳು ಭಾರತದ ನೆಲದಲ್ಲಿವೆ ಎಂದು ಹೇಳಿಕೆ ನೀಡಿದ್ದರು.

ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್​ ಗಾಂಧಿಯ ವಿರುದ್ದ ಹಕ್ಕುಚ್ಯುತಿ ಮಂಡಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು, ರಾಹುಲ್​ ಅವರನ್ನು ತರಾಟೆಗೆ ತಗೆದುಕೊಂಡು, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ನಿರ್ಣಯವನ್ನು ಆರಂಭಿಸುವಂತೆ ಒತ್ತಾಯಿಸಿದ್ದಾರೆ.

ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಐತಿಹಾಸಿಕ ಮತ್ತು ಪ್ರಮುಖ ಸಂಗತಿಗಳನ್ನು ನಾಚಿಕೆಯಿಲ್ಲದೆ ತಿರುಚಿದ್ದಲ್ಲದೆ, ನಮ್ಮ ದೇಶವನ್ನು ಅಪಹಾಸ್ಯ ಮಾಡಲು ಮತ್ತು ನಮ್ಮ ಗಣರಾಜ್ಯದ ಪ್ರತಿಷ್ಠೆಯನ್ನು ಕುಗ್ಗಿಸಲು ಪ್ರಯತ್ನಿಸಿದ್ದಾರೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!