ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಮತ್ತು ಪ್ರತಿಪಕ್ಷಗಳ ಸಂಸದರು ಸಮಾನಾಂತರ ಪ್ರತಿಭಟನೆ ನಡೆಸಿದ ನಂತರ ಸಂಸತ್ತಿನ ಹೊರಗೆ ನಡೆದ ಗದ್ದಲ ಭಾರೀ ವಿವಾದಕ್ಕೆ ಕಾರಣವಾಯಿತು. ಬಿಜೆಪಿ ಸಂಸದ ಪ್ರತಾಪ್ ಚಂದ್ರ ಸಾರಂಗಿ ಅವರನ್ನು ರಾಹುಲ್ ಗಾಂಧಿ ತಳ್ಳಿದ್ದರಿಂದ ನೋವಾಗಿದೆ ಎಂದು ಆರೋಪಿಸಿದ ನಂತರ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್ ಗಾಂಧಿ “ಇದು ನಿಮ್ಮ ಕ್ಯಾಮರಾದಲ್ಲಿ ಇರಬಹುದು. ನಾನು ಸಂಸತ್ತಿನ ಪ್ರವೇಶ ದ್ವಾರದ ಮೂಲಕ ಒಳಗೆ ಹೋಗಲು ಪ್ರಯತ್ನಿಸುತ್ತಿದ್ದೆ, ಬಿಜೆಪಿ ಸಂಸದರು ನನ್ನನ್ನು ತಡೆದು ತಳ್ಳಲು ಮತ್ತು ಬೆದರಿಕೆ ಹಾಕಲು ಪ್ರಯತ್ನಿಸುತ್ತಿದ್ದರು. ಹಾಗಾಗಿ ಇದು ಸಂಭವಿಸಿದೆ” ಎಂದು ಹೇಳಿದರು.
ಈ ಹಿಂದೆ ಬಿಜೆಪಿ ಸಂಸದ ಪ್ರತಾಪ್ ಚಂದ್ರ ಅವರು ಮೆಟ್ಟಿಲುಗಳ ಮೇಲೆ ನಿಂತಿದ್ದಾಗ ಮತ್ತೋರ್ವ ಸಂಸದರು ತಮ್ಮ ಮೇಲೆ ಬಿದ್ದಿದ್ದರಿಂದ ಅವರ ತಲೆಗೆ ಗಾಯವಾಗಿದೆ ಎಂದು ಹೇಳಿಕೊಂಡಿದ್ದರು.