ಹೊಸ ದಿಗಂತ ವರದಿ, ಕೊಪ್ಪಳ:
ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಆಕಾಂಕ್ಷಿಯಾಗಿದ್ದ ಸಂಸದ ಕರಡಿ ಸಂಗಣ್ಣ ಅವರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದ್ದು, ಭಾನುವಾರ
ಕಾರ್ಯಕರ್ತರ ಸಭೆ ಕರೆದಿದ್ದಾರೆ. ಭಾನುವಾರ ಸಂಜೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಜೆಡಿಎಸ್ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕಲ್ಪಿಸಿದ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿ ಸೋಮವಾರ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ.
ಸೋಮವಾರ ಸಂಜೆ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಜೆಡಿಎಸ್ ಸೇರ್ಪಡೆ ಸಾಧ್ಯತೆ ಇದ್ದು, ಕೊಪ್ಪಳ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಯಾಗಿ ಬುಧವಾರ ಸಂಗಣ್ಣ ಕರಡಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ ಎನ್ನಲಾಗಿದೆ.
ದೆಹಲಿಗೆ ವಿಶೇಷ ವಿಮಾನದ ವ್ಯವಸ್ಥೆಯನ್ನು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಲ್ಪಿಸಿರುವುದು ಚರ್ಚೆಗೆ ಗ್ರಾಸವಾಗಿದೆ.