ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, June 25, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಬೆಡ್ ಬ್ಲಾಕಿಂಗ್ ಹಗರಣ: ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಶಾಸಕ ಸತೀಶ್ ರೆಡ್ಡಿ ಬಂಧನಕ್ಕೆ ಕಾಂಗ್ರೆಸ್ ಒತ್ತಾಯ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಬೆಂಗಳೂರು ನಗರದಲ್ಲಿನ ಆಸ್ಪತ್ರೆಗಳಲ್ಲಿ ಬೆಡ್ ಬ್ಲಾಕಿಂಗ್ ಹಗರಣದ ಹಿಂದಿರುವ ಆರೋಪದ ಮೇರೆಗೆ ಸಂಸದ ತೇಜಸ್ವಿ ಸೂರ್ಯ ಹಾಗೂ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಅವರನ್ನು ಬಂಧಿಸಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ.
ಬೆಂಗಳೂರು ದಕ್ಷಿಣ ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ, ಬೊಮ್ಮನಹಳ್ಳಿ ಶಾಸಕ ಎಂ. ಸತೀಶ್ ರೆಡ್ಡಿ ಮತ್ತು ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯಂ ಮಂಗಳವಾರ ಬೆಂಗಳೂರಿನಲ್ಲಿ ಬೆಡ್ ಬ್ಲಾಕಿಂಗ್ ಹಗರಣವನ್ನು ಬೆಳಕಿಗೆ ತಂದಿದ್ದರು ಅಲ್ಲದೇ, ಬಿಬಿಎಂಪಿ ಕೋವಿಡ್ ವಾರ್ ರೂಂನಲ್ಲಿ ನಿಯೋಜಿಸಲ್ಪಟ್ಟ ಕೆಲ ಮುಸ್ಲಿಂರು ಈ ಹಗರಣದಲ್ಲಿ ತೊಡಗಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು.
ಈ ಹಗರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಒಂದೇ ಕೋಮಿನ 17 ಮಂದಿಯ ಹೆಸರನ್ನು ಲೈವ್ ನಲ್ಲಿ ತೇಜಸ್ವಿ ಸೂರ್ಯ ಓದಿದರೆ, ಇವರನ್ನಾ ಬಿಬಿಎಂಪಿಗೆ ನೇಮಕ ಮಾಡಿದ್ದೀರಾ ಅಥವಾ ಮದರಸಕ್ಕೆ ನೇಮಕ ಮಾಡಿದ್ದೀರಾ ಎಂದು ರವಿಸುಬ್ರಹ್ಮಣ್ಯ ಅಧಿಕಾರಿಗಳ ವಿರುದ್ಧ ಗುಡುಗಿದ್ದರು. ಅವರ ಪಕ್ಕದಲ್ಲಿಯೇ ಸತೀಶ್ ರೆಡ್ಡಿ ಕೂಡಾ ಕೂಗಾಡುವ ದೃಶ್ಯ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಶಾಸಕ ಸತೀಶ್ ರೆಡ್ಡಿ ಅವರೇ ಈ ಹಗರಣದ ಹಿಂದಿರುವ ಬಗ್ಗೆ ಕೆಲ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಕಾಂಗ್ರೆಸ್, ಸತ್ಯ ಈಗ ಹೊರಗಡೆ ಬಂದಿದೆ. ಬಿಜೆಪಿ ನಾಯಕರು ಈ ಹಗರಣದ ಹಿಂದಿರುವುದಾಗಿ ಟ್ವೀಟ್ ಮಾಡಿದೆ. ಬೆಂಬಲಿಗರೊಂದಿಗೆ ಬೆಡ್ ಬ್ಲಾಕಿಂಗ್ ಹಗರಣ ನಡೆಸುತ್ತಿರುವ ಸತೀಶ್ ರೆಡ್ಡಿ ಅವರನ್ನು ಬಂಧಿಸಬೇಕು. ಅವರೊಂದಿಗೆ ತೇಜಸ್ವಿ ಸೂರ್ಯ ಅವರನ್ನು ಬಂಧಿಸಬೇಕು. ಅಲ್ಲದೇ ಸಮಗ್ರ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss