Wednesday, October 5, 2022

Latest Posts

ಖುದ್ದು ಬರಿಗೈಯಲ್ಲಿ ಬಾಲಕಿಯರ ಶೌಚಾಲಯ ಸ್ವಚ್ಛಗೊಳಿಸಿದ ಬಿಜೆಪಿ ಸಂಸದ!

ದಿಗಂತ ಡಿಜಿಟಲ್ ಡೆಸ್ಕ್:

ಬಾಲಕಿಯ ಶೌಚಾಲಯ ಶುಚಿ ಇಲ್ಲ ಎಂಬುದನ್ನು ಗಮನಿಸಿ ಬಿಜೆಪಿ ಸಂಸದರೊಬ್ಬರು ಖುದ್ದು ಬರಿಗೈಯಲ್ಲಿ ಶೌಚಾಲಯ ಸ್ವಚ್ಛಗೊಳಿಸಿದ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದ್ದು, ಈ ಬಗೆಗಿನ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸದ್ದು ಮಾಡುತ್ತಿದೆ.

ಪ್ರಧಾನಿ ಮೋದಿ ಜನ್ಮದಿನವಾದ ಸೆ.17 ರಿಂದ ಮಹಾತ್ಮಗಾಂಧಿ ಜನ್ಮದಿನ ಅ. 2 ರವರೆಗೆ ಯುವ ಘಟಕದಿಂದ ಸೇವಾ ಪಖ್ವಾಡ ಸ್ವಚ್ಛತಾ ಅಭಿಯಾನ ನಡೆಯುತ್ತಿದೆ. ಇದರ ಭಾಗವಾಗಿ ಯುವ ಘಟಕವು ಬಾಲಕಿಯರ ಶಾಲಾ ಆವರಣದಲ್ಲಿ ಗಿಡ ನೆಡುವ ಕಾರ್ಯ ಹಮ್ಮಿಕೊಂಡಿತ್ತು. ಈ ವೇಳೆ ಮಧ್ಯಪ್ರದೇಶದ ಬಿಜೆಪಿ ಸಂಸದ ಜನಾರ್ದನ್ ಮಿಶ್ರಾ ಅವರೂ ಅಲ್ಲಿಗೆ ಭೇಟಿ ನೀಡಿದ್ದರು. ಈ ವೇಳೆ ಶಾಲಾ ಶೌಚಾಲಯ ಸ್ವಚ್ಛವಾಗಿಲ್ಲ ಎಂಬುದನ್ನು ಅವರು ಗಮನಿಸಿದ್ದು, ಖುದ್ದು ಅವರೇ ಶೌಚಾಲಯ ಸ್ವಚ್ಛಗೊಳಿಸಲು ಮುಂದಾಗಿದ್ದಾರೆ. ಈ ಶುಚಿತ್ವ ಕಾರ್ಯದ ವೀಡಿಯೋವನ್ನು ಸ್ವತಃ ಸಂಸದರೇ ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

 

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!