April 12, 2026
Sunday, April 12, 2026
spot_img

ಎಲ್‌ಪಿಜಿ ಕೊರತೆವಿದ್ದರೂ ಬಿಜೆಪಿ ಸಂಸದರು ಮಾತನಾಡುತ್ತಿಲ್ಲ: ಡಿಸಿಎಂ ಡಿಕೆ ಶಿವಕುಮಾರ್ ಟೀಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: :

ಎಲ್‌ಪಿಜಿ ಸಿಲಿಂಡರ್‌ ಪೂರೈಕೆಯಲ್ಲಿ ಉಂಟಾಗಿರುವ ತೀವ್ರ ವ್ಯತ್ಯಯ ಕುರಿತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಸಿಲಿಂಡರ್ ಕೊರತೆಯು ರಾಜ್ಯದಲ್ಲಿ ಗಂಭೀರ ಕಳವಳಕಾರಿಯಾಗಿದೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್,ಕೊರತೆಯು ಉದ್ಯಮಗಳು ಮತ್ತು ಸಾರ್ವಜನಿಕರ ಮೇಲೆ ಪರಿಣಾಮ ಬೀರುವುದರಿಂದ ಸಂಸತ್ತಿನ ಸದಸ್ಯರು ಈ ವಿಷಯವನ್ನು ಪ್ರಸ್ತಾಪಿಸಬೇಕೆಂದು ಒತ್ತಾಯಿಸಿದರು. ಇಂದು ಚರ್ಚೆಗೆ ಅವಕಾಶ ನೀಡಬೇಕು. ಇಂದಿನಿಂದ ನಾವು ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಅಡುಗೆ ಅನಿಲ ಸಿಲಿಂಡರ್ ಸಂಗ್ರಹ ಇಲ್ಲ ಎಂದು ಅವರು ಹೇಳಿದರು.

ಎಲ್‌ಪಿಜಿ ಕೊರತೆಯಿಂದ ಹೊಟೇಲ್ ವ್ಯವಹಾರಗಳಿಗೆ ಹೊಡೆತ ಬಿದ್ದಿದೆ. ಆದರೆ ಬಿಜೆಪಿ ಸಂಸದರು ಅದರ ಬಗ್ಗೆ ಮಾತನಾಡುತ್ತಿಲ್ಲ . ಬೇರೆ ಬೇರೆ ವಿಷಯಗಳ ಬಗ್ಗೆ ಸಾಕಷ್ಟು ಮಾತನಾಡುವ ಬಿಜೆಪಿ ಸಂಸದರು ಈಗ ಸಿಲಿಂಡರ್ ಬಗ್ಗೆ ಮೌನ ವಹಿಸಿದ್ದಾರೆ. ತೈಲ ಬೆಲೆ ಏರಿಕೆಯಾಗುತ್ತಿದ್ದಂತೆ ಡೀಸೆಲ್ ಬೆಲೆಯೂ ಇತ್ತೀಚಿಗೆ ಹೆಚ್ಚಾಗಿದ್ದು, ವ್ಯವಹಾರದ ಮತ್ತಷ್ಟು ಪರಿಣಾಮ ಬೀರಿದೆ ಎಂದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !