January 30, 2026
Friday, January 30, 2026
spot_img

ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎನ್ನುವಂತೆ ಕೆಲಸ ಮಾಡುತ್ತಿರುವ ಬಿಜೆಪಿ ಸಂಸದರು: ಡಿಸಿಎಂ ಡಿ.ಕೆ. ಶಿವಕುಮಾರ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಜೆಪಿ ಸಂಸದರು, ಕೇಂದ್ರ ಸಚಿವರು ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎನ್ನುವಂತೆ ಕೆಲಸ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಶಿವಮೊಗ್ಗ ಸರ್ಕಿಟ್‌ ಹೌಸ್‌ ಬಳಿ ಕೇಂದ್ರ ಬಜೆಟ್‌ ಬಗೆಗಿನ ನಿರೀಕ್ಷೆಗಳ ಬಗ್ಗೆ ಕೇಳಿದಾಗ, ಕೇಂದ್ರ ಬಜೆಟ್‌ ಅಲ್ಲಿ ಕೊಟ್ಟ ಮಾತನ್ನೇ ಉಳಿಸಿಕೊಂಡಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಕೊಡುತ್ತೇನೆ ಎಂದು ಹೇಳಿ ಕೊಟ್ಟಿಲ್ಲ ಎಂದು ತಿವಿದರು.

ಬಿಜೆಪಿ ಹಗರಣಗಳನ್ನು ಬಯಲು ಮಾಡೋಣ ಕಾಂಗ್ರೆಸ್‌ ಭ್ರಷ್ಟಾಚಾರ ಎಂದು ಬಿಜೆಪಿ ಪೋಸ್ಟರ್‌ ಅಭಿಯಾನ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರ ಹಗರಣಗಳನ್ನು ನಾವು ಸಹ ಸಾಕಷ್ಟು ಬಿಚ್ಚಿದ್ದೇವೆ. ಕೋವಿಡ್‌ ಸೇರಿದಂತೆ ಹಿಂದೆ ಇದ್ದಂತಹ ಅನೇಕ ಆರೋಪಗಳಿವೆ. ನಾವು ಅವುಗಳನ್ನು ಬಯಲು ಮಾಡೋಣ. ರಾಜಕೀಯ ಮಾಡಬೇಕಲ್ಲ ಎಂದು ಮಾಡುತ್ತಿದ್ದಾರೆ. ಏನೋ ಒಂದು ಬೇಕಲ್ಲ ಅವರಿಗೆ. ಇದರ ಬಗ್ಗೆ ತನಿಖೆ ಮುಗಿಯಲಿ ಎಂದರು.

ಮುಖ್ಯಮಂತ್ರಿಗಳು ಸದನದಲ್ಲಿ ಮನರೇಗಾ ವಿಚಾರವಾಗಿ ಪ್ರಸ್ತಾಪ ಮಾಡಿದ್ದು, ಇದನ್ನು ಕಾರ್ಯಕಲಾಪ ಸಲಹಾ ಸಮಿತಿ ಮುಂದಿಟ್ಟು ತೀರ್ಮಾನ ಮಾಡಬೇಕು ಎಂದು ಸಭಾಧ್ಯಕ್ಷರು ತಿಳಿಸಿದ್ದರು. ಅದರಂತೆ ಗುರುವಾರ ಇದರ ಬಗ್ಗೆ ಚರ್ಚೆಯಾಗಿದೆ. ವಿಬಿ ಗ್ರಾಮ್ ಜಿ ಕಾಯ್ದೆಯನ್ನು ಏಕೆ ರದ್ದು ಮಾಡಬೇಕು ಎಂದು ನಾವು ತಿಳಿಸುತ್ತೇವೆ.ಏಕೆಂದರೆ ಈಗಿರುವ ಪರಿಸ್ಥಿತಿಯಲ್ಲಿ ಯಾವ ರಾಜ್ಯದಲ್ಲಿಯೂ ಇದನ್ನು ಜಾರಿಗೆ ತರಲು ಸಾಧ್ಯವಿಲ್ಲ. ಈಗ ನಾಲ್ಕೈದು ತಿಂಗಳು ವ್ಯವಸಾಯದ ಕಾಲ. ಈ ಸಮಯದಲ್ಲಿ ರೈತರು ಅವರವರ ಕೂಲಿಯನ್ನು ಅವರು ಪಡೆದುಕೊಳ್ಳುತ್ತಿದ್ದರು. ಇಂತಹ ಸಮಯದಲ್ಲಿಯೇ ನರೇಗಾ ಯೋಜನೆ ತೆಗೆದು ಹಾಕಿದರೆ ಯಾರಿಗೂ ಏನೂ ಅನುಕೂಲವಾಗುವುದಿಲ್ಲ ಎಂದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !