ಹೊಸದಿಗಂತ ಡಿಜಿಟಲ್ ಡೆಸ್ಕ್:
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಕೇಸ್ ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ(Jp Nadda)ಮೇಲಿನ ಪ್ರಕರಣಕ್ಕೆ ಧಾರವಾಡ ಹೈಕೋರ್ಟ್(Dharwad High Court) ತಡೆ ನೀಡಿದೆ.
ವಿಧಾನ ಸಭೆ ಚುನಾವಣೆ ವೇಳೆ ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಮೇ 1ರಂದು ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಬಸವರಾಜ ಬೊಮ್ಮಾಯಿ ಪರ ಪ್ರಚಾರ ಮಾಡುವ ಸಂದರ್ಭದಲ್ಲಿ ‘ಮತದಾರರ ಮೇಲೆ ಮೋದಿ ಆಶೀರ್ವಾದ ಇರುತ್ತೆ ಎಂದಿದ್ದರು. ಈ ಮೂಲಕ ಮತದಾರರಿಗೆ ಆಮಿಷವೊಡ್ಡಿರುವ ಆರೋಪ ಕೇಳಿಬಂದಿತ್ತು.
ಈ ಕುರಿತು ಚುನಾವಣಾ ಸಂಹಿತೆ ಅಧಿಕಾರಿಯಾಗಿದ್ದ ಲಕ್ಷ್ಮಣ ನಂದಿ ಎನ್ನುವವರು ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ನಡ್ಡಾ ವಿರುದ್ಧ ದೂರು ದಾಖಲಿಸಿದ್ದರು. ಇಂದು(ಅ.12) ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಕರಣಕ್ಕೆ ಮದ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ.