ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಸಭೆ ಸದಸ್ಯ ಸ್ಥಾನಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ರಾಜೀನಾಮೆ ನೀಡಿದ್ದಾರೆ.
ರಾಜ್ಯಸಭೆ ಸಭಾಪತಿ, ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ನಡ್ಡಾ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದು, ರಾಜ್ಯಸಭೆ ಸಭಾಪತಿ ರಾಜೀನಾಮೆ ಅಂಗೀಕರಿಸಿದ್ದಾರೆ.
ಇದೀಗ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂಬ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ನಡ್ಡಾ ಅವರು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತವಾಗಿದೆ.